Slider

ಉಡುಪಿ ನಗರದ ವಿವಿಧೆಡೆ ನಾಳೆ ಉಚಿತ ಕೋವಿಡ್ ವ್ಯಾಕ್ಸಿನ್ ಲಭ್ಯ 14-09-21

 ಉಡುಪಿ ಜಿಲ್ಲೆಯಲ್ಲಿ ಪ್ರಥಮ ಮತ್ತು ಎರಡನೇ ಡೋಸ್ ಕೋವಿಡ್ ಲಸಿಕೆ ನಾಳೆ ಲಭ್ಯವಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯಲು ಜಿಲ್ಲೆಯ ಹತ್ತಿರದ ಸರಕಾರಿ ಆಸ್ಪತ್ರೆ, ಆಶಾ ಕಾರ್ಯಕರ್ತೆ ಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ನಂತರದಲ್ಲಿ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

      ಉಡುಪಿ ನಗರ ಪ್ರದೇಶದ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದ ಜಿಲ್ಲಾ ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಪ್ರಥಮ ಮತ್ತು 2ನೇ ಡೋಸ್-150 ಲಭ್ಯವಿರುತ್ತದೆ. ಮಣಿಪಾಲದ ಮಾಧವ ಕೃಪಾ ಶಾಲೆಯಲ್ಲಿ ಕೋವಿಶೀಲ್ಡ್ ಒಟ್ಟು 500 ಡೋಸ್ ಹಾಗೂ ಕೋವ್ಯಾಕ್ಸಿನ್ ಎರಡನೇ ಡೋಸ್ 200 ಲಭ್ಯವಿದೆ.

ಅದೇ ರೀತಿ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 100 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅ.10ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕೆ ಪಡೆಯಲು 28 ದಿನಗಳ ಗಡುವು ಮೀರಿದವರಿಗೆ 100 ಡೋಸ್ ಲಸಿಕೆ ಲಭ್ಯವಿದೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.

ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo