ಕರಾವಳಿ ಮಲೆನಾಡು ಸೆ.6 ರವರೆಗೆ ಗುಡುಗು ಸಹಿತ ಭಾರೀ ಮಳೆ
: ಇಂದಿನಿಂದ ಸೆ. 6ರವರೆಗೂ ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಸೆ. 5 ಮತ್ತು 6ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸುಮಾರು 20 ದಿನಗಳಿಂದ ಮಳೆಯಾಗುತ್ತಲೇ ಇದೆ.
ಕಳೆದೊಂದು ವಾರದಿಂದ ಮಳೆಯ ಆರ್ಭಟ ಜಾಸ್ತಿಯಾಗಿದ್ದು, ಇಂದಿನಿಂದ ಎರಡು ದಿನ ಮತ್ತೆ ಮಳೆ ಮುಂದುವರೆಯಲಿದೆ. ಸೆ. 5 ಮತ್ತು 6ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಎರಡು ದಿನಗಳಿಂದ ಮತ್ತೆ ಮಳೆ ಶುರುವಾಗಿದೆ. ಇಂದು ಕೂಡ ಮಧ್ಯಾಹ್ನ 1 ಗಂಟೆಗೆ ಮಳೆಯಾಗಲಿದ್ದು, ರಾತ್ರಿ 8 ಗಂಟೆಯ ಬಳಿಕ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸೆ. 5 ಮತ್ತು 6ರಂದು ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ (Yellow Alert) ಘೋಷಿಸಲಾಗಿದೆ.
ಇಂದಿನಿಂದ ಸೆ. 6ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಸೆ. 5 ಮತ್ತು 6ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರ್ಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಸೆ. 6ರಂದು ವಿಪರೀತ ಮಳೆಯಾಗುವ ಸಾಧ್ಯತೆಯಿದೆ.
ಇಂದಿನಿಂದ ಸೆ. 6ರವರೆಗೂ ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇಂದು ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ 4 ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ಮಾತ್ರವಲ್ಲದೆ ಇನ್ನೂ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಕರ್ನಾಟಕ, ಬಿಹಾರ, ಮಧ್ಯಪ್ರದೇಶ, ದೆಹಲಿ, ಉತ್ತರಾಖಂಡ ರಾಜ್ಯಗಳಲ್ಲಿ ಕೂಡ ಇಂದು ವ್ಯಾಪಕ ಮಳೆಯಾಗಲಿದೆ. ಹಾಗೇ, ತಮಿಳುನಾಡು, ರಾಯಲಸೀಮೆ, ಆಂಧ್ರಪ್ರದೇಶ, ಸೌರಾಷ್ಟ್ರ, ಮಾಹೆ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ವಿದರ್ಭ, ಬಿಹಾರ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಪುದುಚೆರಿ, ಛತ್ತೀಸ್ಗಢ, ಚಂಡೀಗಢ, ಹರಿಯಾಣ, ಪಂಜಾಬ್, ಲಕ್ಷದ್ವೀಪ, ಅಂಡಮಾನ್-ನಿಕೋಬಾರ್, ಜಮ್ಮು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗೋವಾ, ಒರಿಸ್ಸಾ, ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ