ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ ಅವಕಾಶ
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ(udupi District Court) ಶೀಘ್ರ ಲಿಪಿಗಾರ (stenographer job) ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ನ್ಯಾಯಾಲಯದಲ್ಲಿ ಖಾಲಿ ಇರುವ 8 ಶೀಘ್ರ ಲಿಪಿಗಾರ ಹುದ್ದೆಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ.
ಎಸ್ಎಸ್ಎಲ್ಸಿ ಅಥವಾ ಮಾನ್ಯತೆ ಪಡೆದ ಬೋರ್ಡ್ನಿಂದ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇದೇ ಸೆಪ್ಟೆಂಬರ್ 30 ಕಡೆಯ ದಿನಾಂಕವಾಗಿದೆ. ನೇಮಕಾತಿ ಕುರಿತು ಅಧಿಸೂಚನೆಯನ್ನು ಈ ತಾಣದಲ್ಲಿ ಪಡೆಯಬಹುದಾಗಿದೆ. ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕಾಗಿದ್ದು, ಯಾವುದೇ ಅಂಚೆ ಅಥವಾ ಇನ್ನಿತ ರೀತಿಯಲ್ಲಿ ಅರ್ಜಿ ಸಲ್ಲಿಕೆ ಸಾಧ್ಯವಿಲ್ಲ.
ವಿದ್ಯಾರ್ಹತೆ (Education)
ಕರ್ನಾಟಕ ಫ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್ಎಸ್ಎಲ್ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.
ಜೊತೆಗೆ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು. ಅಥವಾ
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದಲ್ಲಿ ಡಿಪ್ಲೋಮ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಗಳನ್ನು ಐಚ್ಚಿಕ ವಿಷಯಗಳನ್ನಾಗಿ ಹೊಂದಿರಬೇಕು
ಆಯ್ಕೆ ವಿಧಾನ (recruitment process)
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶೀಘ್ರಲಿಪಿಗಾರ ಹುದ್ದೆಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ವೇತನ: (Salary)
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27, 650 ರಿಂದ 52,650 ರೂವರೆಗೆ ವೇತನ ನೀಡಲಾಗುವುದು
ವಯೋಮಿತಿ (Age limit)
ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ, 2 ಎ, 2 ಬಿ, 3 ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ.
ಅರ್ಜಿ ಶುಲ್ಕ (Application Fee)
ಅಭ್ಯರ್ಥಿಗಳು ಮೇಲ್ಕಂಡ ಲಿಂಕ್ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಸಾಮಾನ್ಯ ವರ್ಗ, ಪ್ರವರ್ಗ-1, 2 ಎ, 2 ಬಿ, 3 ಎ ಮತ್ತು 3ಬಿ ಅಭ್ಯರ್ಥಿಗಳಿಗೆ 200 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 100 ರೂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ. ಈ ಅರ್ಜಿಯನ್ನು ಆನ್ ಲೈನ್ ಅಥವಾ ಎಸ್ಬಿಐ ಬ್ರಾಂಚ್ ಮೂಲಕ ಕಟ್ಟಬಹುದಾಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಅಕ್ಟೋಬರ್ 4 ಆಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ (how to apply)
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ ನೀಡಲಾದ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಅಥವಾ ಎಸ್ಬಿಐನ ಶಾಖೆಗಳ ಮೂಲಕ ಪಾವತಿಸಬೇಕಾಗಿದೆ. ಇದರ ಹೊರತಾಗಿ ಯಾವುದೇ ಡಿಮ್ಯಅಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಲು ಸಾಧ್ಯವಿಲ್ಲ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ