ಪರ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹಡಗೆಟ್ಟಿರುವ ವಾಹನ ಚಾಲಕರಿಗೆ ತೊಂದರೆಯಾಗುತ್ತಿರುವ ಭೂಸಂತ್ರಸ್ಥರಿಗೆ ಕಳೆದ ನಾಲ್ಕು ತಿಂಗಳಿಂದ ಹಣ ಬಿಡುಗಡೆ ಮಾಡದೆ ವಿಳಂಬ ಮಾಡುತ್ತಿರುವ ಜಿಲ್ಲಾಡಳಿತ, ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಸ್ಥಳೀಯ ಶಾಸಕರು ಶೀಘ್ರ ಪರ್ಕಳ ರಸ್ತೆಗೆ ಕಾಯಕಲ್ಪ ಒದಗಿಸಬೇಕು. ಬಹಳ ಸಮಯದಿಂದ ಈ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸುವ ವಾಹನ ಸವಾರರು ತೊಂದರೆ ಅನುಭವದ ಪ್ರಮಾಣ.ಭೂಸಂತ್ರಸ್ಥರಿಗೆ ಹಣದ ಶೀಘ್ರ ಬಿಡುಗಡೆ, ಹೊಸ ರಸ್ತೆಯ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಪ್ರತಿಭಟನಕಾರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ನಾಯಕರ ಅಮೃತ ಶೆಣೈ, ಸುಕೇಶ್ ಕುಂದರ್ ಹೆರ್ಗಾ, ಮೋಹನ್ ದಾಸ್ ನಾಯಕ್ ಪರ್ಕಳ, ಗಣೇಶ್ ರಾಜ್ ಸರಳೇಬೆಟ್ಟು, ಗಣೇಶ್ ನೆರ್ಗಿ, ಸುಧಾಕರ್ ಪೂಜಾರಿ, ಸದಾನಂದ ಪೂಜಾರಿ ಸತೀಶ್ ಶೆಟ್ಟಿ ಕೆಳ ಪರ್ಕಳ, ವೆಂಕಟೇಶ್ ಶೆಟ್ಟಿಗಾರ್, ಜಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ವರದಿ:-UDUPI FIRST
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ