Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸಾಸ್ತನದಲ್ಲಿ ದೊರೆ ಇಮ್ಮಡಿ ದೇವರಾಯನ ಶಾಸನ ಪತ್ತೆ

ಸಾಸ್ತಾನ, ಸೆ 2 ಉಡುಪಿ ಜಿಲ್ಲೆಯ ಸಾಸ್ತಾನದ ಪಾಂಡೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಂಕಬೆಟ್ಟುವಿನಲ್ಲಿರುವ ಶ್ರೀನಿವಾಸ ಭಟ್ ಅವರ ನಿವಾಸದ ಹಿಂಭಾಗದ ಬಾವಿಯ ಹತ್ತಿರದಲ್ಲಿ 14 ನೇ ಶತಮಾನದ ಶಾಸನವನ್ನು ಇತಿಹಾಸ‌ ಮತ್ತು ಪುರಾತತ್ವ ವಿದ್ವಾಂಸರಾದ ಡಾ| ಎಸ್.ಜಿ. ಸಾಮಕ್ ಅವರು ಪತ್ತೆ ಮಾಡಿದ್ದಾರೆ, ಇದನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ.
ಸಂಗ್ರಹ ಚಿತ್ರ

ಗ್ರಾನೈಟ್ (ಕಣ) ಶಿಲೆಯಲ್ಲಿ ಕೆತ್ತಲ್ಪಟ್ಟ ಈ ಶಾಸನವು 180 ಸೆಂ.ಮೀ ಎತ್ತರ 60 ಸೆಂ.ಮೀ ಅಗಲವಿದೆ. ಶಾಸನದ ಮೇಲ್ಬಾಗದಲ್ಲಿ ಬ್ರಾಹ್ಮಣ ವಟು ಹಾಗೂ ಇಕ್ಕೆಲಗಳಲ್ಲಿ ಸೂರ್ಯ-ಚಂದ್ರ ಮತ್ತು ಶಂಖ-ಚಕ್ರದ ಉಬ್ಬು ಕೆತ್ತನೆಯಿದೆ. ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನವನ್ನು ಬಾವಿಯ ಹಾಸುಗಲ್ಲಾಗಿ ಬಳಸಿಕೊಂಡಿರುವುದರಿಂದ ಹೆಚ್ಚಿನ ಅಕ್ಷರಗಳು ತೃಟಿತಗೊಂಡಿದ್ದು, ಶಾಸನದಲ್ಲಿ ಶಕವರುಷ 1355 (ಕ್ರಿ.ಶ 1433) ನೇ ಪ್ರಮಾದಿ (ಪ್ರಮಾದ) ನಾಮ ಸಂವತ್ಸರದ ಉಲ್ಲೇಖವಿದೆ.

ವರದಿ:Team Inspiring You
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo