ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 35ಕ್ಕೂ ಅಧಿಕ ಹಿಂದೂ ಧರ್ಮೀಯರನ್ನು ಸೇರಿಸಿಕೊಂಡು ಪ್ರಗತಿ ಕಾಂಪೌಂಡ್ ಬಳಿ ಪ್ರಾರ್ಥನೆ ನೆಪದಲ್ಲಿ ಮತಾಂತರ ನಡೆಯುತ್ತಿರುವ ಬಗ್ಗೆ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಕಾರ್ಕಳ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕೇಂದ್ರಕ್ಕೆ ದಾಳಿ ಮಾಡಿದ್ದಾರೆ. ದಿಢೀರ್ ದಾಳಿಯಿಂದಾಗಿ ಹಿಂ.ಜಾ.ವೇ ಕಾರ್ಯಕರ್ತರು ಹಾಗೂ ಪ್ರಾರ್ಥನೆ ಆಯೋಜಿಸಿದವರ ನಡುವೆ ಘರ್ಷಣೆ ನಡೆದು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ವರದಿ:-UDUPI FIRST
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ