ಕೋಟ: ಸೇತುಬಂಧ ಗೀರಿಶ್ ಭಾರದ್ವಾಜ್ ಗೆ ಒಲಿದು ಬಾ. ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ.
ಕುಂದಾಪುರ ಸೆಪ್ಟೆಂಬರ್ 23: ಪ್ರತಿ ವರ್ಷದಂತೆ ಕೊಡಮಾಡಲ್ಪಡುವ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಈ ಬಾರಿಗೆ ತೂಗು ಸೇತುವೆಯ ಹರಿಕಾರ ಗಿರೀಶ್ ಭಾರಧ್ವಜ್ ಅವರು ಆಯ್ಕೆಯಾಗಿದ್ದಾರೆ. ಕೋಟತಟ್ಟು ಗ್ರಾಮ ಪಂಚಾಯತ್ ಕೋಟ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ದ ಸಹಭಾಗಿತ್ವದಲ್ಲಿ ಕಳೆದ ಹದಿನಾರು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ.
ಸೇತುಬಂಧು ಎಂದೇ ಕರೆಯಲ್ಪಡುವ ಗಿರೀಶ್ ಭಾರದ್ವಾಜ್ ಗ್ರಾಮೀಣ ಪ್ರದೇಶದ ಜನರ ಜೀವನದಲ್ಲಿ ಹೊಸ ಬೆಳಕು ಮೂಡಿಸುವಂತೆ ಒಟ್ಟು 130 ತೂಗು ಸೇತುವೆ ನಿರ್ಮಾಣ ಮಾಡಿದವರು. ಅಲ್ಲದೇ ಸಮಾಜ ಸೇವೆಯಲ್ಲೂ ಕ್ರೀಯಾಶೀಲರಾಗಿ ಮುಂದುವರೆದವರು. ಇವರ ಸಾಧನೆಯನ್ನು ಪರಿಗಣಿಸಿ ಭಾರತ ಸರಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.
ಅಕ್ಟೋಬರ್ ಹತ್ತರಂದು ನಡೆಯುವ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ. ಈ ಬಾರಿ ಕಾರಂತ ಜನ್ಮ ದಿನೋತ್ಸವದ ಅಂಗವಾಗಿ ಅಕ್ಟೋಬರ್ ಒಂದರಿಂದ ಹತ್ತರವರೆಗೆ ಹತ್ತು ದಿನಗಳ ಸಾಂಸ್ಕೃತಿಕ- ಸಾಹಿತ್ಯಿಕ ಸುಗ್ಗಿ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾಗಿದೆ. ಕಾರಂತ ಚಿಂತನ,-ನೃತ್ಯ ಪ್ರದರ್ಶನ, ಸಂಗೀತ ಸುಧೆ-ಯಕ್ಷ-ನಾಟ್ಯ-ವೈಭವ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಕಾರಂತ ಥೀಮ್ ಪಾರ್ಕ್ ಯುಟ್ಯೂಬ್ ಹಾಗೂ ಪೇಸ್ ಬುಕ್ ಪೇಜ್ ನಲ್ಲಿ ಪ್ರಸಾರಗೊಳ್ಳಲಿದೆ ಎಂದು ತಿಳಿದುಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ