Slider

ಪೇಜಾವರ ಶ್ರೀ ಶ್ರೀ ಶ್ರೀ ವಿಶ್ವೇಶ ಪ್ರಸನ್ನ ತೀರ್ಥ ಭೇಟಿಯಾದ ಕೇಂದ್ರ ಸಚಿವ ಭಗವಂತ್ ಖೂಬಾ

ಪೇಜಾವರ ಶ್ರೀ ಶ್ರೀ ಶ್ರೀ ವಿಶ್ವೇಶ ಪ್ರಸನ್ನ ತೀರ್ಥ ಭೇಟಿಯಾದ ಕೇಂದ್ರ ಸಚಿವ ಭಗವಂತ್ ಖೂಬಾ
ಉಡುಪಿ, ಸೆ.5: ಕೇಂದ್ರ ರಸಗೊಬ್ಬರ ರಾಸಾಯನಿಕ ಮತ್ತು ನವೀಕರಿಸಬಹು ದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ರವಿವಾರ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಗುರುವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸ್ವಾಮೀಜಿ ಸಚಿವರೊಂದಿಗೆ ನವೀಕರಿಸಬಹುದಾದ ಇಂಧನಗಳ ಸಾಧ್ಯತೆಗಳ ಕುರಿತು ಸಮಾಲೋಚನೆ ನಡೆಸಿದರು. ಗೋವಿನ ಸೆಗಣಿಯಿಂದ ವಿದ್ಯುತ್ ತಯಾರಿಸುವ ಬಗ್ಗೆಯೂ ಮಾತಾಡಿದ ಸ್ವಾಮೀಜಿ, ದೇಶದಲ್ಲಿ ದೊಡ್ಡ ದೊಡ್ಡ ಗೋಶಾಲೆಗಳಲ್ಲಿ ಗೋಮಯದ ಹೇರಳ ಲಭ್ಯತೆ ಯನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳುವ ಬಗ್ಗೆ ಸರಕಾರದಿಂದ ವ್ಯವಸ್ಥೆ ಮಾಡಿದರೆ ಉತ್ತಮ ಎಂದರು.
ಖೂಬಾರವರು ಇತ್ತೀಚೆಗೆ ಬೀದರ್, ಕೊಪ್ಪಳ, ಬಾಗಲಕೋಟೆಗಳಲ್ಲಿ ಸೋಲಾರ್ ಪಾರ್ಕ್ ನಿರ್ಮಿಸುವ ಘೋಷಣೆ ಮಾಡಿದ ವಿಚಾರದ ಬಗ್ಗೆ ಸಂತಸ ವ್ಯಕ್ತಪಡಿಸಿದ ಸ್ವಾಮೀಜಿ, ಸೂರ್ಯಶಕ್ತಿ ಎಲ್ಲ ರೀತಿಯಿಂದಲೂ ಭವಿಷ್ಯಕ್ಕೆ ಅತ್ಯಂತ ಭರವಸೆಯ ಇಂಧನವಾಗಿದೆ. ಈ ಮೂರು ಜಿಲ್ಲೆಗಳ ಜೊತೆಗೆ ರಾಜ್ಯದ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಯಾವುದಾದರೂ ಒಂದು ಕಡೆ ಸೋಲಾರ್ ಪಾರ್ಕ್ ನಿರ್ಮಿಸಬೇಕೆಂದು ಅಪೇಕ್ಷಿಸಿ ಲಿಖಿತ ಪತ್ರವನ್ನು ಸಚಿವರಿಗೆ ನೀಡಿದರು. ಈ ಕುರಿತು ಮುಖ್ಯಮಂತ್ರಿಗಳು ಮತ್ತು ರಾಜ್ಯ ಸರಕಾರದ ಜೊತೆ ಸಮಾಲೋಚಿಸಿ ತೀರ್ಮಾನಿಸುವುದಾಗಿ ಸಚಿವರು ಭರವಸೆ ನೀಡಿದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo