ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಅಮೃತ ಯೋಜನೆ ಹಾಗೂ ಕೋವಿಡ್ ನಿರ್ವಹಣೆ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಸುನೀಲ್ ಕುಮಾರ್ ಮಾತನಾಡುತಿದ್ದರು. ಸಭೆಯಲ್ಲಿ ಕೋವಿಡ್ ಸೋಂಕಿತರು, ಲಸಿಕೆ ವಿತರಣೆ, ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಪ್ರಗತಿ ಮತ್ತಿತರ ವಿಷಯಗಳ ಕುರಿತು ವಿವರವಾಗಿ ಚರ್ಚೆ ನಡೆಸಲಾಯಿತು.
ಇದೇ ವೇಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೇ.100ರಷ್ಟು ಲಸಿಕೀಕರಣ ಪೂರ್ಣಗೊಳಿಸಿದ ಕುಂದಾಪುರ ತಾಲೂಕಿನ ಕಾವ್ರಾಡಿ ಹಾಗೂ ಬಳ್ಕೂರು ಗ್ರಾಮಪಂಚಾಯತ್ ಗಳಿಗೆ ಸಚಿವರು ಅಭಿನಂದನೆ ವ್ಯಕ್ತಪಡಿಸಿದರು. ಶೇ.100ರಷ್ಟು ವ್ಯಾಕ್ಸಿನೇಷನ್ ಪೂರ್ಣಗೊಂಡ ಗ್ರಾಪಂಗಳ ಅಧ್ಯಕ್ಷರಿಗೆ ಹಾಗೂ ಅಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.
ಅಮೃತ ಗ್ರಾಮ ಪಂಚಾಯತ್, ಅಮೃತ ಶಾಲೆ, ಅಮೃತ ಆರೋಗ್ಯ ಯೋಜನೆಯಡಿ ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾನದಂಡಗಳ ಆಧಾರದ ಮೇಲೆ ಗ್ರಾಪಂಗಳ, ಪ್ರಾಥಮಿಕ ಆರೋಗ್ಯ ಕೇಂದ್ರಗಳ, ಸರಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಭೆಯಲ್ಲಿ ಉಡುಪಿಯ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ