ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಸಹ ಪ್ರಭಾರಿಯಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬುಧವಾರ ಯುಪಿ ವಿಧಾನಸಭಾ ಚುನಾವಣಾ ಪಕ್ಷ ಪ್ರಭಾರಿ ಮತ್ತು ಸಹ ಪ್ರಭಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಶಿಕ್ಷಣ ಮತ್ತು ಕೌಶಲ ವಿಕಾಸ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಭಾರಿಯಾಗಿದ್ದರೆ, ಏಳು ಮಂದಿ ಸಹಪ್ರಭಾರಿಗಳಿದ್ದಾರೆ. ಅವರ ಪೈಕಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಒಬ್ಬರಾಗಿದ್ದಾರೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ