Slider

ಉಡುಪಿಯಲ್ಲಿ ಮೆಗಾ ಲೋಕಆದಲತ್

ಉಡುಪಿ, ಸೆ.14: ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಅಕ್ಟೋಬರ್ 23 ರಂದು ನಿಗದಿಪಡಿಸಲಾಗಿದ್ದ ಮೆಗಾ ಲೋಕ್ ಅದಾಲತ್‌ನ್ನು ಸೆಪ್ಟೆಂಬರ್ 30 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದೆ.
ವೈವಾಹಿಕ ಪ್ರಕರಣ, ಕುಟುಂಬ ಕಲಹ, ಚೆಕ್ ಬೌನ್ಸ್, ವಾಹನ ಅಪಘಾತ ಹಾಗೂ ವಿಮಾ ಪ್ರಕರಣ ಸೇರಿದಂತೆ ರಾಜಿ ಸಂಧಾನದ ಮೂಲಕ ಬಗೆಹರಿಸ ಬಲ್ಲ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗುವುದು.
    
ಅಕ್ರಮ ಮರಳು ಮತ್ತು ಕಲ್ಲು ಸಾಗಾಣಿಕೆ ಮಾಡುವಾಗ ಜಪ್ತಿ ಮಾಡಿದ ವಾಹನಗಳನ್ನು ದಂಡ ಕಟ್ಟುವ ಮೂಲಕ ಲೋಕ್ ಅದಾಲತ್‌ನಲ್ಲಿ ಪ್ರಕರಣ ಗಳನ್ನು ಬಗೆಹರಿಸಿಕೊಳ್ಳಬಹುದು. ನ್ಯಾಯಾಧೀಶರು, ವಿವಿಧ ಇಲಾಖೆಗಳ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸುವರು. ಕೋವಿಡ್ ಸಂದರ್ಭದಲ್ಲಿ ಲೋಕ್ ಅದಾಲತ್ ಮೂಲಕ ಈಗಾಗಲೇ ಹಲವು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಲಾಗಿದೆ.
ಕಳೆದ ಆಗಸ್ಟ್‌ನಲ್ಲಿ ನಡೆದ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ 3065 ಪ್ರಕರಣಗಳು ಹಾಗೂ 179 ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಲಾಗಿದೆ. ಲೋಕ್ ಅದಾಲತ್‌ಗೆ ಸಂಬಂಧಿಸಿದಂತೆ ಪ್ರತೀ ದಿನ ಎಲ್ಲಾ ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್‌ಗಳು ನಡೆಯುತ್ತವೆ. ಕಕ್ಷಿದಾರರು ನ್ಯಾಯಾಲಯದಲ್ಲಿ ವಿಚಾರಣೆಗೆ ಇರುವ ಪ್ರಕರಣಗಳನ್ನು ತಮ್ಮ ವಕೀಲರ ಮೂಲಕ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಾಯವಾಣಿ ಮೂಲಕ ಮಾಹಿತಿ ಪಡೆದು ಲೋಕ್ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ.
ಎರಡೂ ಕಡೆಯ ಪಕ್ಷಗಾರರು ಪರಸ್ಪರ ರಾಜೀ ಮೂಲಕ ತಮ್ಮ ವಾದಗಳನ್ನು ಬಗೆಹರಿಸಿಕೊಂಡಲ್ಲಿ ಭಾಂದವ್ಯವು ಉಳಿದು ವಾದವು ಇತ್ಯರ್ಥವಾಗುತ್ತದೆ. ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಸಂಪೂರ್ಣವಾಗಿ ಮರು ಪಾವತಿಸಲಾಗುವುದು. ಕಕ್ಷಿದಾರರು ಆನ್‌ಲೈನ್, ವೀಡಿಯೋ ಕಾನ್ಪರೆನ್ಸ್ ಹಾಗೂ ಎಲೆಕ್ಟಾನಿಕ್ ಮಾಧ್ಯಮಗಳ ಮೂಲಕ ಹಾಗೂ ಖುದ್ದಾಗಿ ಹಾಜ ರಾಗುವ ಮೂಲಕ ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಯಾ ತಾಲೂಕಿನ ಕಾನೂನು ಸೇವಾ ಸಮಿತಿ ಮತ್ತು ದೂರವಾಣಿ ಸಂಖ್ಯೆ: 0820-2523355ನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆ ಗಳ ಸಮಿತಿ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo