ಉಡುಪಿ ಸಪ್ಟೆಂಬರ್ 16: ಅನಾರೋಗ್ಯ ಪೀಡಿತ ಮಗುವನ್ನು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ಆಂಬ್ಯುಲೆನ್ಸ್ ನ ಟೈಯರ್ ಸ್ಪೋಟಗೊಂಡು ಅಪಘಾತಕ್ಕೀಡಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯಪೀಡಿತ ಮಗುವನ್ನು ಕರೆದುಕೊಂಡು ಬರುತ್ತಿದ್ದ ಅಂಬ್ಯುಲೆನ್ಸ್ ನ ಟೈಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಅಂಬ್ಯುಲೆನ್ಸ್ ಡಿವೈಡರ್ ದಾಟಿ ಕುಂದಾಪುರಕ್ಕೆ ಸಾಗುವ ರಸ್ತಗೆ ಸಾಗುವ ಸೇತುವೆ ಆವರಣ ಗೊಡೆಗೆ ಡಿಕ್ಕಿಯಾಗಿದೆ.
ಅದೃಷ್ಟವಶಾತ್ ಸೇತುವೆಯ ಆವರಣಗೊಡೆಗೆ ಡಿಕ್ಕಿಯಾದ ಪರಿಣಾಮ ಅಂಬ್ಯುಲೆನ್ಸ್ ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದು, ದೊಡ್ಡ ದುರಂತ ತಪ್ಪಿದಂತಾಗಿದೆ.
ಅಪಘಾತದಲ್ಲಿ ಆಂಬುಲೆನ್ಸ್ ನಲ್ಲಿ ಮಗುವನ್ನು ಕರೆದೊಯ್ಯುತ್ತಿದ್ದ ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ತಕ್ಷಣಕ್ಕೆ ಸ್ಥಳಕ್ಕೆ ಕೋಟ ಪೊಲೀಸರು ಆಗಮಿಸಿ ಪ್ರಕರಣದ ಕುರಿತು ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆಯಿಂದಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು ಎಂದು ತಿಳಿದುಬಂದಿದೆ.
ವರದಿ:-UDUPI FIRST
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ