Slider


ವಿಧಾನ ಪರಿಷತ್ ಸಭಾನಾಯಕರಾಗಿ ನೇಮಕಗೊಂಡ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಸಮಾಜ ಕಲ್ಯಾಣ  ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನಪರಿಷತ್ ಸಭಾ ನಾಯಕರನ್ನಾಗಿ ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ನಾಮನಿರ್ದೇಶನದ ಕುರಿತು ಸಭಾಪತಿಗೆ ಅಧಿಕೃತ ಮಾಹಿತಿಯನ್ನು ನೀಡಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಅವರು ಸತತ 3 ಬಾರಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಪ್ರತಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. ಶ್ರೇಷ್ಠ ವಾಗ್ಮಿಯಾಗಿ ಗುರುತಿಸಿಕೊಂಡಿರುವ ಅವರು ಅತ್ಯಂತ ಸಮರ್ಥವಾಗಿ ಸದನವನ್ನು ನಿಭಾಯಿಸುವ ಚಾಕಚಕ್ಯತೆ ಉಳ್ಳವರಾಗಿದ್ದಾರೆ. ಅವರ ಮಾತುಗಾರಿಕೆ ಈ ಹಿಂದೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರನ್ನು ಚಕಿತಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳಿಗೆ ಸೂಕ್ತ ಎದುರೇಟು ನೀಡುವ ಸಾಮರ್ಥ್ಯವುಳ್ಳ ಅವರನ್ನೇ ನಾಯಕರನ್ನಾಗಿ ನಾಮನಿರ್ದೇಶನ ಗೊಳಿಸಿದ್ದಾರೆ.
ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo