Slider

ನಿಫ ವೈರಸ್ ಭೀತಿ ಕೇರಳ ಪ್ರಯಾಣಿಕರಿಗೆ ಪ್ರಯಾಣ ಮುಂದೂಡಲು ಉಡುಪಿ ಡಿಸಿ ಮನವಿ

ನಿಫ ವೈರಸ್ ಭೀತಿ ಕೇರಳ ಪ್ರಯಾಣಿಕರಿಗೆ ಪ್ರಯಾಣ ಮುಂದೂಡಲು  ಉಡುಪಿ ಡಿಸಿ ಮನವಿ
ಕರ್ನಾಟಕಕ್ಕೆ ಆಗಮಿಸುವ ಕೇರಳದ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಪ್ರಸ್ತುತ ಕೋವಿಡ್ 19 ನೆಗೆಟಿವ್ RT-PCR ವರದಿಯನ್ನು ಹೊಂದಿದ್ದು, ಆದರೆ  ಕರ್ನಾಟಕಕ್ಕೆ ಬಂದ ಮೇಲೆ ಪರಿಶೀಲಿಸಿದಾಗ ಕೋವಿಡ್ 19 RT-PCR ವರದಿಯು ಪಾಸಿಟಿವ್ ಬರುತ್ತಿದ್ದು, ಅಂತಹ ಪ್ರಕರಣಗಳ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದ್ದು ಕೋವಿಡ್ -19 ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ಕೇರಳದಿಂದ ಆಗಮನಕ್ಕಾಗಿ ಸರಕಾರದಿಂದ ಕಾಲಕಾಲಕ್ಕೆ ಸೂಚನೆಗಳನ್ನು ನೀಡಲಾಗುತ್ತಿದೆ. ಅದರಂತೆ ಈ ಕೆಳಗಿನಂತೆ ಸೂಚನೆಗಳನ್ನು ನೀಡಲಾಗಿದೆ. 
1. ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಆಡಳಿತಾಧಿಕಾರಿಗಳು/ ನರ್ಸಿಂಗ್ / ಪ್ಯಾರಾಮೆಡಿಕಲ್‌ನ/ ಪ್ರಾಂಶುಪಾಲರು ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಿದ್ಯಾರ್ಥಿಗಳಿಗೆ  ಅಕ್ಟೋಬರ್-2021ರ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ಸೂಚನೆ ನೀಡುವುದು. 
2. ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಕಛೇರಿಗಳು, ಹೋಟೆಲ್‌ಗಳು, ಕಾರ್ಖಾನೆಗಳು, ಇತ್ಯಾದಿ ಎಲ್ಲಾ ಸಂಸ್ಥೆಗಳ ಮಾಲೀಕರು/ಆಡಳಿತಾಧಿಕಾರಿಗಳು  ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಅಕ್ಟೋಬರ್-2021 ರ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ಸೂಚನೆ ನೀಡುವುದು.
3. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ತುರ್ತು ಇಲ್ಲದಿದ್ದರೆ ಕೇರಳಕ್ಕೆ ಭೇಟಿ ನೀಡುವ ಯೋಜನೆಯನ್ನು ಅಕ್ಟೋಬರ್-2021ರ ಅಂತ್ಯದವರೆಗೆ ಮುಂದೂಡಲು ಸಾರ್ವಜನಿಕರಿಗೆ  ಮನವಿ ಮಾಡುತ್ತಾ ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸುವಂತೆ ಕೋರುತ್ತೇನೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo