ಜಿಲ್ಲೆಯಲ್ಲಿ ಹಲವುದಿನಗಳಿಂದ ಮಳೆಯ ವಾತಾವರಣವಿದ್ದು ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಅಧಿಕ ಇರುವುದರಿಂದ ಮೀನುಗಾರಿಕೆಗೆ ತೆರಳುವವರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.8ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲು ಕೂಡ ಹಳದಿ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಕೆಲವು ಕಡೆ ಹೆಚ್ಚು ಮಳೆಯಾಗಲಿದೆ. ಬೆಳಗಾವಿ, ಬೀದರ್, ಹಾವೇರಿ, ಗದಗ, ರಾಯಚೂರು ಜಿಲ್ಲೆಗಳಲ್ಲಿ ಸೆ. 7ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಇಂದು ಭಾರಿ ಮಳೆಯಾಗುವ ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ವರದಿ:-UDUPI FIRST
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ