Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಂಗಳೂರು - ಏರ್‌ಪೋರ್ಟ್ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ , ವಿಮಾನ ಸೇವೆಯಲ್ಲಿ ಹೆಚ್ಚಳ.

ಮಂಗಳೂರು, ಸೆ 3: ಕೋವಿಡ್19 ಆತಂಕದ ಮದ್ಯೆಯೂ, ದೇಶ- ವಿದೇಶಗಳಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳುವ ಪ್ರಯಾಣಿಕರಿಗೆ ವಿಮಾನ ಯಾನ ಸೇವೆ ಏರಿಕೆಯಾಗಿದೆ, ಹಾಗೂ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳವಾಗಿದೆ.

ದೇಶದ ವಿವಿಧ ರಾಜ್ಯಗಳಿಗೆ ಆಗಸ್ಟ್ ತಿಂಗಳಲ್ಲಿ 26,067 ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ. ಕಳೆದ ಜುಲೈನಲ್ಲಿ ಈ ಸಂಖ್ಯೆ 18,557 ಆಗಿದ್ದು, ಈ ಮೂಲಕ ವಿಮಾನ ಯಾನ ಪ್ರಯಾಣಿಕರ ನಿರ್ಗಮನ ಪ್ರಮಾಣದಲ್ಲಿ ಶೇ.40ರಷ್ಟು ಏರಿಕೆ ಕಂಡು ಬಂದಿದೆ. ಇದೇ ವೇಳೆ ಆಗಸ್ಟ್‌ನಲ್ಲಿ ವಿವಿಧ ರಾಜ್ಯಗಳಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 26732ಪ್ರಯಾಣಿಕರು ಬಂದಿಳಿದಿದ್ದರೆ, ಕಳೆದ ಜುಲೈನಲ್ಲಿ ಈ ಸಂಖ್ಯೆ 19744ಕ್ಕೆ ಕುಸಿತ ಕಂಡಿತ್ತು.


ಭಾರತದ ಒಳಗೆ ಮತ್ತು ವಿದೇಶಗಳ ಪ್ರಯಾಣಗಳ ಮೇಲಿನ ನಿರ್ಬಂಧಗಳನ್ನು ಸರಳಗೊಳಿಸಿರುವುದರಿಂದ ವಿವಿಧ ವಿಮಾನ ಯಾನ ಸಂಸ್ಥೆಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧ ಸ್ಥಳಗಳಿಗೆ ವಿಮಾನಯಾನವನ್ನು ಪುನರಾರಂಭಿಸಿರುವುದಾಗಿ ಮತ್ತು ಪ್ರಯಾಣಿಕರ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡು ಬಂದಿದೆ ಎಂದು ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಟನೆ ಸ್ಪಷ್ಟನೆ ನೀಡಿದೆ.

ಯುಎಇ ಸರಕಾರವು ತನ್ನ ದೇಶಕ್ಕೆ ಪ್ರಯಾಣಿಸಲು ಅನುಮತಿ ನೀಡಿದ ಬಳಿಕ ಇಂಡಿಗೋ ಸಂಸ್ಥೆ ಶಾರ್ಜಾಗೆ ತನ್ನ ವಿಮಾನಯಾನ ಪುನರಾರಂಭಿಸಿದೆ. ಇದೇ ಸಮಯದಲ್ಲಿ ಭಾರತಾದ್ಯಂತ ಸಂಚಾರ ದಟ್ಟಣೆ ಹೆಚ್ಚಾಗಿರುವುದರಿಂದ ಇಂಡಿಗೋ ಹೈದಾರಾಬಾದ್‌ಗೆ ಹೆಚ್ಚುವರಿ ವಿಮಾನ ಹಾರಾಟ ಆರಂಭಿಸಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಕರ ಸಂಖ್ಯೆ ಸುಧಾರಣೆಯಾದ ಕಾರಣ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಬುಧಾಬಿಗೆ ತನ್ನ ವಿಮಾನ ಹಾರಾಟವನ್ನು ಪುನರಾರಂಭಿಸಿದೆ. ಆಗಸ್ಟ್‌ನಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಬುಧಾಬಿ, ದುಬೈ, ತಿರುವನಂತಪುರಕ್ಕೆ ವಿಮಾನ ಯಾನ ನಡೆಸಿದೆ. ಇಂಡಿಗೋ ಹೈದರಾಬಾದ್ ಮತ್ತು ಶಾರ್ಜಾ, ಏರ್ ಇಂಡಿಯಾ ಮುಂಬೈ ಮತ್ತು ಕೊಯಮತ್ತೂರಿಗೆ ಪ್ರತಿನಿತ್ಯದ ಯಾನ ಆರಂಭಿಸಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.

ವರದಿ: Team Inspiring You
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo