ಮಂಗಳೂರು:- ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬ್ಯಾಗ್ ಕಳವಿಗೆ ಯತ್ನಿಸಿದ ಘಟನೆ ಮಂಗಳೂರಿನ ಬೆಂದೂರ್ವೆಲ್ನಲ್ಲಿರುವ ಸೈಂಟ್ ಆಗ್ನೇಸ್ ಕಾಲೇಜಿನ ಗೇಟಿನ ಮುಂಬಾಗ ನಡೆದಿದೆ.
ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬಂದ ನಂಬರ್ ಪ್ಲೇಟ್ ಇಲ್ಲದ ರಿಟ್ಸ್ ಕಾರಿನಲ್ಲಿ ಬಂದ ಗುಂಪೊಂದರಲ್ಲಿ ವ್ಯಕ್ತಿಯೊಬ್ಬ ಕೆಳಗೆ ಇಳಿದು ಮಹಿಳೆಯ ದರೋಡೆಗೆ ಯತ್ನಿಸಿದ್ದಾನೆ. ಈವೇಳೆ ಪ್ರತಿರೋಧ ವ್ಯಕ್ತಪಡಿಸಿದ ಮಹಿಳೆ ಕಳ್ಳನಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ರಸ್ತೆಯಲ್ಲೇ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿದ್ದ ಸ್ಥಳೀಯರು ಮಹಿಳೆಯ ಸಹಾಯಕ್ಕೆ ಧಾವಿಸಿದ್ದಾರೆ. ಇದನ್ನು ಗಮನಿಸಿದ ಕಳ್ಳ ಕಾರು ಏರಿ ಪರಾರಿಯಾಗಿದ್ದಾನೆ. ಸದ್ಯ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಡಿಯೋ ನೋಡಿ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ