Slider

ಕಾರ್ಕಳ ಮತಾಂತರ ಪ್ರಕರಣ:- ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ನಾವು ದಾಳಿ ಮುಂದುವರಿಸುತ್ತೇವೆ ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ

ಉಡುಪಿಯಲ್ಲಿ ಕಳೆದ ಹಲವು ವರ್ಷಗಳಿಂದ ಮತಾಂತರ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ, ನೂರಾರು ಹಿಂದೂಗಳನ್ನು ಕ್ರೈಸ್ತ ಮಿಶನರಿಗಳು ಮತಾಂತರ ಮಾಡುತ್ತಿದ್ದಾರೆ, ಇದು ಹೀಗೇ ಮುಂದುವರಿದರೆ ನಾವು ದಾಳಿ ಮುಂದುವರಿಸುತ್ತೇವೆ ಎಂದು ಹಿಂದೂ ಜಾಗರಣೆ ವೇದಿಕೆಯ ಮುಖಂಡ ಪ್ರಕಾಶ್ ಕುಕ್ಕೆ ಹಳ್ಳಿ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಅದ್ದೂರಿ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ಕೊಟ್ಟಿಲ್ಲ. ಪ್ರಾರ್ಥನೆಯ ಹೆಸರಿನಲ್ಲಿ ಮತಾಂತರಕ್ಕೆ ಅವಕಾಶವಿದೆ. ಮತಾಂತರಿಗೆ ಕೋವಿಡ್ ನಿಯಮ ಪಾಲನೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಕರಾವಳಿ ಜಿಲ್ಲೆಯಲ್ಲಿ ಹಲವಾರು ಮತಾಂತರ ಕೇಂದ್ರಗಳಿವೆ. ಸೂಕ್ತವಾದ ಕ್ರಮ ಕೈಗೊಳ್ಳದಿದ್ದರೆ ನಾವು ದಾಳಿ ಮುಂದುವರಿಸುತ್ತೇವೆ. ಪರಿಸ್ಥಿತಿ ಹದಗೆಡಲು ಅವಕಾಶ ಕೊಡಬೇಡಿ ಎಂದು ಹಿಂದೂ ಜಾಗರಣ ವೇದಿಕೆ ನಾಯಕ ಪ್ರಕಾಶ್ ಕುಕ್ಕೆಹಳ್ಳಿ ಎಚ್ಚರಿಕೆ ನೀಡಿದ್ದಾರೆ.
ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo