ಸಿಮೆಂಟ್ ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ
ಚಾಮರಾಜನಗರ: ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ ಅಟ್ಟುಗುಳಿಪುರದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ನಡೆದಿದೆ.
ತಮಿಳುನಾಡಿನಿಂದ ಮೈಸೂರಿಗೆ ಸಿಮೆಂಟ್ ಚೀಲಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿಯ ಎಂಜಿನ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ನೋಡ ನೋಡುತ್ತಿದ್ದಂತೆ ಸಂಪೂರ್ಣ ಲಾರಿಯೇ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿಷಯ ತಿಳಿದ ಚಾಮರಾಜನಗರ ಅಗ್ನಿ ಶಾಮಕ ಸಿಬ್ಬಂದಿ, ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ