Slider

ದೇಗುಲ ಧ್ವಂಸ ಪ್ರಕರಣ:- ಉಡುಪಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ:- ಮೈಸೂರಿನ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಸ್ಥಾನಗಳನ್ನು ಕೆಡವಿದರೆ ನಮಗೆ ಒಳ್ಳೆದಾಗಲ್ಲ , ಶ್ರದ್ಧಾಕೇಂದ್ರಗಳ ಬಗ್ಗೆ ಜನರ ನಂಬಿಕೆ ಜಾಸ್ತಿ ಇರುತ್ತದೆ. ಭಕ್ತಿ - ಭಾವ ಜಾಸ್ತಿ ಇರುತ್ತೆ ಅಂತಹ ಪವಿತ್ರ ಕೇಂದ್ರಗಳನ್ನು ಕೆಡವಿದಾಗ ಭಕ್ತರ ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಯಾವುದೇ ಸಮುದಾಯ, ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ ಎಂದು ಪರೋಕ್ಷವಾಗಿ ತಮ್ಮದೇ ಸರ್ಕಾರದ ಕ್ರಮವನ್ನು ಟೀಕಿಸಿದರು.
ಹೆಚ್ಚಿನ ಮಾಹಿತಿಗಾಗಿ
ದೇವಸ್ಥಾನ, ಮಸೀದಿ, ಚರ್ಚ್ ನಮ್ಮ ಶ್ರದ್ಧಾ ಕೇಂದ್ರಗಳು. ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮ ಜವಾಬ್ದಾರಿ. ಅಕ್ರಮ ಸ್ಥಳದಲ್ಲಿ ಶ್ರದ್ಧಾಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಬೇಕು. ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಜನರನ್ನು ಒಪ್ಪಿಸಿ ಧಾರ್ಮಿಕ ಕೇಂದ್ರ ತೆರವು ಮಾಡುವ ಬಗ್ಗೆ ಸರ್ಕಾರ ಯೋಚಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo