Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ಜನತೆಯ ಪ್ರೀತಿ ಎಂದಿಗೂ ಮರೆಯಲಾರೆ: ನಿರ್ಗಮಿತ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿಕೆ.

ಉಡುಪಿ ಜಿಲ್ಲೆಯ ಜನತೆ ತೋರಿರುವ ಅಭಿಮಾನ, ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ, ಇಲ್ಲಿಯ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯ ಉನ್ನತ ಹುದ್ದೆಗೆ ಹೋಗಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಹೆಚ್ಚಿನ ಅವಧಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ಮೀಸಲಿಡಲಾಯಿತು ಆದ್ದರಿಂದ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗಲಿಲ್ಲ ಎಂಬ ಕೊರಗು ಇದೆ, ಆದರೆ ಕೋವಿಡ್ ನಿಂದ ಜಿಲ್ಲೆಯಲ್ಲಿ ಹೆಚ್ಚು ಸಾವುಗಳು ಸಂಭವಿಸದಂತೆ ಅಗತ್ಯ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ, ಸೋಂಕು ಹೆಚಿದ್ದರೂ ಅತೀ ಕಡಿಮೆ ಸಾವು ಸಂಭವಿಸಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಜಿಲ್ಲೆಗೆ ದೊರೆತಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಸೋಧ್ಯಮವನ್ನು ಅಭಿವೃಧ್ದಿಪಡಿಸುವ ಅನೇಕ ಯೋಜನೆಗಳನ್ನು ರೂಪಿಸಿ ಅವುಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ,ಕಂದಾಯ ಸೇವೆಗಳನ್ನು ಒದಗಿಸುವಲ್ಲಿ ಜಿಲ್ಲೆ ಇಂದಿಗೂ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ ಅಲ್ಲದೇ ಸಂಸದರು ಮತ್ತು ಶಾಸಕರ ಪ್ರದೇಶಾಭಿವೃಧ್ದಿ ಅನುದಾನವನ್ನು ಬಳಿಸಿ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಸಹ ಪ್ರಥಮ ಸ್ಥಾನದಲ್ಲಿದೆ ,ಕೋವಿಡ್ ಲಸಿಕೆ ನೀಡುವಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದರು.

ವರದಿ:Team Inspiring You
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo