Slider

ಉಡುಪಿ:- ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ , ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ

ಉಡುಪಿ, ಸೆ.8: ಐದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಸಂಬಂಧ ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ.
2016 ಜನವರಿ ತಿಂಗಳಿನಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂತ್ರಸ್ತ ಬಾಲಕಿ ಮನೆಗೆ ಅಕ್ರಮ ಪ್ರವೇಶ ಮಾಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು.
ನಂತರ ಕುಂದಾಪುರದಲ್ಲಿದ್ದ ಮಹಿಳಾ ಠಾಣೆಗೆ ಈ ಪ್ರಕರಣ ವರ್ಗಾವಣೆಯಾಗಿದ್ದು ಅಂದಿನ ಮಹಿಳಾ ಠಾಣೆ ಎಸೈ ಸುಜಾತಾ ಸಾಲ್ಯಾನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 17 ಸಾಕ್ಷಿದಾರರಲ್ಲಿ 10 ಮಂದಿ ಸಾಕ್ಷಿ ವಿಚಾರಣೆ ನಡೆಸಿದ್ದು ಪ್ರಮುಖವಾಗಿ ಸಂತ್ರಸ್ತ ಬಾಲಕಿ ಹಾಗೂ ಆಕೆ ಸಹೋದರ ನುಡಿದ ಸಾಕ್ಷಿ ಅಭಿಯೋಜನೆಗೆ ಪೂರಕ ವಾಗಿದ್ದು ಆರೋಪಿ ಅಪರಾಧ ಎಸಗಿರುವುದು ಸಾಭೀತಾಗಿದೆ ಎಂದು ನ್ಯಾಯಾಧೀಶೆ ಎರ್ಮಾಳು ಕಲ್ಪನಾ ಅಭಿಪ್ರಾಯ ಪಟ್ಟರು.

ಅದರಂತೆ ಆರೋಪಿಗೆ ಪೋಕ್ಸೋ ಕಾಯ್ದೆಯಡಿ 3 ವರ್ಷ ಕಠಿಣ ಸಜೆ, 10 ಸಾವಿರ ರೂ. ದಂಡ, ದಂಡ ಪಾವತಿಸದಿದ್ದಲ್ಲಿ 1 ವರ್ಷ ಸಜೆ, ಅಕ್ರಮ ಪ್ರವೇಶ (ಐಪಿಸಿ ಸೆಕ್ಷನ್ 448), ಅಕ್ರಮ ತಡೆಗೆ (ಐಪಿಸಿ 342) ತಲಾ 6 ತಿಂಗಳಿನಂತೆ 1 ವರ್ಷ ಸಜೆ, 1 ಸಾವಿರ ರೂ. ದಂಡ ತಪ್ಪಿದಲ್ಲಿ 2 ತಿಂಗಳು ಜೈಲು, ಕೊಲೆ ಬೆದರಿಕೆ(ಐಪಿಸಿ ಕಲಂ 506) 1 ವರ್ಷ ಜೈಲು, 1500 ರೂ. ದಂಡ, ತಪ್ಪಿದಲ್ಲಿ 6 ತಿಂಗಳು ಸಜೆಯನ್ನು ವಿಧಿಸಲಾಗಿದೆ. ಒಟ್ಟು 12,500 ರೂ. ದಂಡದ ಮೊತ್ತದಲ್ಲಿ 7,500 ರೂ. ಸರಕಾರಕ್ಕೆ ಹಾಗೂ 5 ಸಾವಿರ ಮೊತ್ತವನ್ನು ಬಾಲಕಿಗೆ ನೀಡಲು ಮತ್ತು ಸರಕಾರದಿಂದ ನೊಂದ ಬಾಲಕಿಗೆ 25 ಸಾವಿರ ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.


ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
ವರದಿ:-UDUPI FIRST

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo