Slider


ಉಡುಪಿ:-ಬಾಣಂತಿ ಮಹಿಳೆ ವೈದ್ಯರ ನಿರ್ಲಕ್ಷಕ್ಕೆ ಸಾವು; ಆರೋಪ

ಉಡುಪಿ ಬಾಣಂತಿ ಮಹಿಳೆ ,ವೈದ್ಯರ ನಿರ್ಲಕ್ಷಕ್ಕೆ ಹೆರಿಗೆಯಾದ ಬೆನ್ನಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮೃತರ ಕುಟುಂಬಸ್ಥರು ಆಸ್ಪತ್ರೆಯ ಮುಂಭಾಗದಲ್ಲಿ ಘಟನೆಯ ಪ್ರತಿಭಟನೆ ನಡೆಸಿದ್ದಾರೆ.
ಕೋಟ ನಿವಾಸಿಯಾಗಿರುವ ಉಷಾ(26) ಮೃತ ಗರ್ಭಿಣಿ. ಕೋಟೇಶ್ವರದ ಶಾಲೆಯೊಂದರಲ್ಲಿ ಶಿಕ್ಷಕಿ ವೃತ್ತಿಯನ್ನು ನಡೆಸುತಿದ್ದರು ಎಂದು ತಿಳಿದುಬಂದಿದೆ. 
ಸಪ್ಟೆಂಬರ್‌ 23 ರಂದು ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆಯನ್ನು ಮಾಡಿಸಲಾಗಿತ್ತು. ಉಷಾ ಅವರಿಗೆ ಗಂಡು ಮಗು ಜನಿಸಿತ್ತಲ್ಲದೆ ಹೆರಿಗೆಯ ನಂತರದಲ್ಲಿ ತಾಯಿಯ ಆರೋಗ್ಯದಲ್ಲಿ ತೀವ್ರ ವ್ಯತ್ಯಯ ಕಂಡುಬಂದಿದೆ. ಹೀಗಾಗಿ ಆ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವಿಧಿ ಲೀಲೆಯೆ ಬೇರೆ ಇತ್ತು ಎನ್ನುವ ಹಾಗೆ ಚಿಕಿತ್ಸೆ ಫಲಕಾರಿಯಾಗದೇ ಉಷಾ 
ಮೃತಪಟ್ಟಿದ್ದಾರೆ.

 
ಉಷಾ ಅವರ ಸಾವಿಗೆ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅದಲ್ಲದೆ ಇದೇ ಕಾರಣಕ್ಕೆ ಕುಟುಂಬಸ್ಥರು ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದು, ತಪ್ಪಿತಸ್ಥ ವೈದ್ಯರ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಉಡುಪಿ ನಗರ ಆರಕ್ಷಕ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ಕೊಟ್ಟ ಜಿಲ್ಲಾ ಸರ್ಜನ್‌ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳು, ಹೆರಿಗೆಯಾದ ನಂತರದಲ್ಲಿ ಮಹಿಳೆಗೆ ಮೂರ್ಛೆ ರೋಗ ಕಾಣಿಸಿಕೊಂಡಿದ್ದು, ಕೂಡಲೇ ಅವರಿಗೆ ಚಿಕಿತ್ಸೆಯನ್ನು ನೀಡಿದ್ದೇವೆ. ಆದರೆ ಚಿಕಿತ್ಸೆ ಸ್ಪಂದಿಸಿಲ್ಲ ಅನ್ನೋ ಹೇಳಿಕೆಯನ್ನು ನೀಡಿದ್ದು ಇದೀಗ ಕುಟುಂಬಸ್ಥರು ವೈದ್ಯಾಧಿಕಾರಿಗಳ ಹೇಳಿಕೆಯನ್ನು ಒಪ್ಪುವುದಕ್ಕೆ ಬದ್ದರಿಲ್ಲ. 
 
ಸರಕಾರಿ ಹೆರಿಗೆ ಆಸ್ಪತ್ರೆಗೆ ಉಷಾ ಅವರನ್ನು ದಾಖಲು ಮಾಡಿದ ನಂತರದಲ್ಲಿ ಆಸ್ಪತ್ರೆಯಲ್ಲಿನ ವೈದ್ಯಾಧಿಕಾರಿಗಳು ಸರಿಯಾಗಿ ಚಿಕಿತ್ಸೆಯನ್ನು ನೀಡಿಲ್ಲ. ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಇಂತಹ ಘಟನೆಗಳು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಪ್ರಕರಣಗಳು ನಡೆದಿವೆ. ಆದರೆ ಜನಪ್ರತಿನಿಧಿಗಳು ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳುತ್ತಿಲ್ಲ ಅನ್ನೋ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
ಉಡುಪಿ ಜಿಲ್ಲೆಯಲ್ಲಿ ಬಾಣಂತಿ ಹಾಗೂ ಗರ್ಭಿಣಿಯರ ಸಾವಿನ ಪ್ರಕರಣ ಹೆಚ್ಚುತ್ತಿದೆ. ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇಂತಹ ಪ್ರಕರಣ ಪದೇ ಪದೇ ಮರುಕಳಿಸುತ್ತಿದ್ದರೂ ಕೂಡ ಸರಕಾರ ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಇನ್ನೊಂದೆಡೆಯಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸುವ ವೈದ್ಯರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo