Slider


ಮಲ್ಪೆ ಮೀನುಗಾರ ಸಮುದಾಯಕ್ಕೆ ಕೆ.ಪಿ.ಸಿ.ಸಿ ವತಿಯಿಂದ ಆಂಬುಲೆನ್ಸ್ ಹಸ್ತಾಂತರ

ಮಲ್ಪೆ:- ರಾಜ್ಯ ಕಾಂಗ್ರೆಸ್ ವತಿಯಿಂದ ಮಲ್ಪೆ ಮೀನುಗಾರಿಕಾ ಸಾಮುದಾಯಿಕ ಆಂಬುಲೆನ್ಸ್ ಹಸ್ತಾಂತರ ಮಾಡಲಾಯಿತು.
 ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಮಲ್ಪೆ ಮೀನುಗಾರರು ಆಂಬುಲೆನ್ಸ್‌ಗೆ ಬೇಡಿಕೆ ಇಟ್ಟಿದ್ದರು. ಈ ಮನವಿಗೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್ ಆಂಬುಲೆನ್ಸ್ ಒಂದನ್ನು ಕಳುಹಿಸಿಕೊಟ್ಟಿದ್ದಾರೆ. ಇದನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಭವನದ ಮುಂಭಾಗ ಆಂಬುಲೆನ್ಸ್ ಕೀಯನ್ನು ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಲ್ಪೆ ಬಂದರಿನಲ್ಲಿ ಸಾವಿರಾರು ಬೋಟ್‌ಗಳು ಹಾಗೂ ಮೀನುಗಾರರಿದ್ದಾರೆ, ಅವಘಡವಾದಾಗ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲೂ ವ್ಯವಸ್ಥೆಗಳಿರಲಿಲ್ಲ, ಇದನ್ನು ಅರ್ಥ ಮಾಡಿಕೊಂಡು ಡಿಕೆಶಿವಕುಮಾರ್ ಆಂಬುಲೆನ್ಸ್ ಕಳುಹಿಸಿ ಕೊಟ್ಟಿದ್ದಾರೆ. ಗಣೇಶ ಚತುರ್ಥಿ ದಿನವೇ ಆಂಬುಲೆನ್ಸ್ ಹಸ್ತಾಂತರ ಮಾಡಿದ್ದೇವೆ, ಆಂಬುಲೆನ್ಸ್ ಉಪಯೋಗಿಸುವ ಪ್ರಸಂಗವೇ ಬಾರದೇ ಇರಲಿ ಎಂದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ್ ಕೊಡವೂರು, ರಮೇಶ್ ಕಾಂಚನ್ , ಯತೀಶ್ ಕರ್ಕೇರ, ಪ್ರಖ್ಯಾತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo