Slider

ಉಡುಪಿ:-ನಾಳಿನ ಭಾರತ್ ಬಂದ್‌‌ಗೆ ಜಿಲ್ಲಾ ಕಾಂಗ್ರೆಸ್ ಬೆಂಬಲ

ನಾಳಿನ ಭಾರತ್ ಬಂದ್‌ ಪರ ಉಡುಪಿ ಜಿಲ್ಲಾ ಕಾಂಗ್ರೆಸ್

ಉಡುಪಿ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಬಂದ್‌ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ , ನಾಳೆ ನಡೆಯುವ ಭಾರತ ಬಂದ್‌ಗ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಲಿದೆ, ರೈತ ಸಂಘಟನೆಗಳು ಕರೆಕೊಟ್ಟ ಭಾರತ ಬಂದ್ ಮುಷ್ಕರ ಕಾರ್ಯಕ್ರಮವನ್ನು ಒಂದು ರಾಷ್ಟ್ರೀಯ ಆಂದೋಲನವನ್ನಾಗಿಸಿ ಯಶಸ್ವಿಗೊಳಿಸಿ ಕೇಂದ್ರ ಸರಕಾರ ವನ್ನು ಎಚ್ಚರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಸೋಮವಾರದ ಭಾರತ್ ಬಂದ್ ಕಾರ್ಯಕ್ರಮದಲ್ಲಿ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ರೈತ ಪರ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊವೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo