Slider

ಬಸ್ ದರ ಇಳಿಸುವಂತೆ ಜಿಲ್ಲಾಧಿಕಾರಿಗಳಿಗೆ ವಿವಿಧ ಸಂಘಟನೆಗಳ ಮನವಿ

ಉಡುಪಿ:- ಏರಿಕೆಯಾಗಿರುವ ಬಸ್‌ದರಗಳನ್ನು ಕಡಿಮೆ ಮಾಡುವಂತೆ ಆಗ್ರಹಿಸಿ ಇಂದು ವಿವಿಧ ಸಂಘಟನೆಯ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಲಾಕ್‌ಡೌನ್ ನಿಯಮಗಳು ಸಡಿಲಗೊಂಡ ನಂತರ ಸಿಟಿ ಬಸ್ ಮತು ಇತರೆ ಖಾಸಗಿ ಬಸ್ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸಲಾಗಿದೆ. ಇದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಪ್ರಾಮಾಣಿಕರಿಗೆ ಹೊರೆಯಾಗುತ್ತಿದೆ ಹೀಗಾಗಿ ಬಸ್ ದರವನ್ನು ಕಡಿಮೆ ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕರ್ನಾಟಕ ಪ್ರಾಂತ ರೈತ ಸಂಘ ಸಂಚಾಲಕ ಶಶಿಧರ್ ಗೊಲ್ಲ, ಸಿಐಟಿಯು ಉಡುಪಿ ತಾಲೂಕು ಅಧ್ಯಕ್ಷ ರಾಮ ಕಾರ್ಕಡ, ಎಐಎಡಬ್ಲುಯು ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್ ಎಸ್., ಉಡುಪಿ ಬೀಡಿ ಆಯಂಡ್ ಟೊಬ್ಯಾಕೋ ಲೇಬರ್ ಯುನಿಯನ್ನ ಅಧ್ಯಕ್ಷೆ ನಳಿನಿ, ಕಾರ್ಯದರ್ಶಿ ಉಮೇಶ್ ಕುಂದರ್ ಉಪಸ್ಥಿತರಿದ್ದರು

ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo