Slider

ಬಂಗಾಳಕೊಲ್ಲಿಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರ:- ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಗುಲಾಬ್ ಚಂಡ ಮಾರುತದ ಪರಿಣಾಮವಾಗಿ ಕರಾವಳಿಯ ಭಾಗದಲ್ಲಿ ಮಳೆ ಪ್ರಾರಂಭವಾಗಿದೆ. ಇಂದು ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆ ಮುಂದುವರೆದಿದ್ದು, ಅಕ್ಟೋಬರ್ 1 ರವರೆಗೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
 ಗುಲಾಬ್ ಚಂಡಮಾರುತದ ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಈ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಗುಲಾಬ್​ ಚಂಡಮಾರುತ ಗಂಟೆಗೆ 70-80 ಕಿ.ಮೀ. ವೇಗ ಇರಲಿದೆ. ಚಂಡಮಾರುತ  ಕಾಳಿಂಗ ಪಟ್ಟಣ, ವಿಶಾಖಪಟ್ಟಣ, ಮತ್ತು ಗೋಪಾಲಪುರಗಳ‌ ಮೂಲಕ ಹಾದುಹೋಗಲಿರುವವುದರಿಂದ ಅಲ್ಲಿ  ಈಗಾಗಲೇ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo