ಶಾಹಿನ್ ಚಂಡಮಾರುತ ಕಟ್ಟೆಚ್ಚರ: ಎಲ್ಲೊ ಅಲರ್ಟ್ ಘೋಷಣೆ
ಶಾಹೀನ್ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಇಂದಿನಿಂದ ಅಕ್ಟೋಬರ್ ಮೂರರವರೆಗೂ ಭೀಕರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಅಕ್ಟೋಬರ್ 3ರ ವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.
ಇಂದಿನಿಂದ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೀದರ್, ಕಲಬುರ್ಗಿ, ವಿಜಯಪುರದಲ್ಲಿ ಭಾರಿ ವರ್ಷಧಾರಿ ಆಗುವ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನದ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವರದಿ:- ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ