ಕರಾವಳಿ,ಮಲೆನಾಡಿನಲ್ಲಿ ಭಾರೀ ಮಳೆ ಹಲವೆಡೆ ಹೈ ಅಲರ್ಟ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಸೆ. 25ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಅತ್ತ ಉತ್ತರ ಭಾರತದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಗುಜರಾತ್ನಲ್ಲಿ ಇಂದಿನಿಂದ 4 ದಿನ ಅಂದರೆ ಸೆ. 25ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಸೆ. 23ರಂದು ವಿಪರೀತ ಮಳೆಯಾಗಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ