Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿಯಲ್ಲಿ ಕಟ್ಟುನಿಟ್ಟಿನ ವಾರಾಂತ್ಯ ಕರ್ಫ್ಯೂ :- ನೂತನ ಜಿಲ್ಲಾಧಿಕಾರಿ ಕುರ್ಮಾರಾವ್ ಆದೇಶ

ಉಡುಪಿ:- ಜಿಲ್ಲೆಯಾದ್ಯಂತ ವೀಕೆಂಡ್‌ ಲಾಕ್‌ಡೌನ್ ಮತ್ತು ನೈಟ್‌ ಕರ್ಪ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಕುರ್ಮಾ ರಾವ್ ತಿಳಿಸಿದ್ದಾರೆ.

ವೀಕೆಂಡ್‌ ಲಾಕ್‌ಡೌನ್ ಮತ್ತು ನೈಟ್‌ ಕರ್ಪ್ಯೂ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳ್ಳಗೆ 5 ಗಂಟೆವರೆಗೆ ನೈಟ್‌ ಕರ್ಪ್ಯೂ ಜಾರಿಯಲ್ಲಿದ್ದು, ಅಗತ್ಯ ಚಟುವಟಿಕೆಗಳಿಗೆ ಹೊರತು ಪಡಿಸಿ ಜನರ ಓಡಾಟವನ್ನು ಕಡ್ದಾಯವಾಗಿ ನಿಷೇಧಿಸಲಾಗಿದೆ" ಎಂದು ತಿಳಿಸಿದ್ದಾರೆ.

ಪ್ರತಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಪ್ರತಿ ಸೋಮವಾರ ಬೆಳ್ಳಗೆ 5 ಗಂಟೆವರೆಗೆ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರಲಿದ್ದು, ಈ ಸಮಯದಲಿ ಅಗತ್ಯ ತುರ್ತು ಸೇವೆಗಳು ಮತ್ತು ಕೊರೊನಾ ಕಂಟೈನೈಂಟ್ ಮತ್ತು ಮ್ಯಾನೆಜ್ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದ್ದ ಅಂತಹ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಮತು ಸಿಬ್ಬಂಧಿಗಳಿಗೆ ಮಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇನ್ನು ವೀಕೆಂಡ್‌ ಲಾಕ್‌ಡೌನ್, ನೈಟ್‌ ಕರ್ಪ್ಯೂ ಆದೇಶವನ್ನು ಪಾಲಿಸದೇ ಇದ್ದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಗೆ ನೀಡಿದ್ದಾರೆ.

ಈ ಆದೇಶಗಳು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ನೈಟ್ ಕರ್ಪ್ಯೂ ಮಾರ್ಗಸೂಚಿಗಳು :-

1) ರಾತ್ರಿ 9.00 ರಿಂದ ಮುಂಜಾನೆ 5 ರ ನಡುವೆ ಅಗತ್ಯ ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

2) ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು-ತುರ್ತು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿಸಿದೆ.

3) ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ಹಾಗೂ ಅಂತಹ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಥೆಯಿಂದ ನೀಡಲಾದ ಸೂಕ್ತ ಗುರುತಿನ ಚೀಟಿ / ಅನುಮತಿಗೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸುವ ಮೂಲಕ ಸಂಚರಿಸಬಹುದಾಗಿದೆ.

4) ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಒದಗಿಸುವ ನೌಕರರು ಹಾಗೂ ವಾಹನಗಳನ್ನು ತಮ್ಮ ಸಂಸ್ಥೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯನ್ನು ಸಲ್ಲಿಸಿ ಸಂಚರಿಸಬಹುದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನೆ / ಸಂಸ್ಥೆ ( IT and ITeS companies /organization) ಗಳಲ್ಲಿ ಕಾರ್ಯ ನಿರ್ವಹಿಸುವ ಅಗತ್ಯ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕಾರ್ಯನಿರ್ವಹಿಸುವುದು (work from home)
5) ವೈದ್ಯಕೀಯ, ತುರ್ತು ಹಾಗೂ ಔಷಧಾಲಯಗಳನ್ನು ಒಳಗೊಂಡ ಅವಶ್ಯಕ ಸೇವೆಗಳು ಯಥಾ ರೀತಿಯಲ್ಲಿ ಸರಕಾರದ ನಿಯಮಗಳೊಂದಿಗೆ ಕಾರ್ಯನಿರ್ವಹಿಸವುದು. ಹಾಗೂ

ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿದೆ.

6) ಎಲ್ಲಾ ತರಹದ ಟ್ರಕ್ ಗಳಲ್ಲಿ ಸಾಗಿಸುವ ಸರಕಗಳು, ಸರಕು ವಾಹನ ಅಥವಾ ಇತರೆ ಸರಕು ಸಾಗಾಟ ವಾಹನಗಳು, ಖಾಲಿ ವಾಹನಗಳನ್ನು ಒಳಗೊಂಡು ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಕಂಪನಿಗಳು ಹಾಗೂ ಹೋಮ್ ಡೆಲಿವರಿ ಕೆಲಸವನ್ನು ಮುಂದುವರೆಸಲು ಅನುಮತಿಸಿದೆ.

7) ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ .ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ , ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.”


ವರದಿ:-Team Inspiring You

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo