ಕುಕ್ಕೆ ಧರ್ಮಸ್ಥಳ ದೇವರ ದರ್ಶನ,ಸೇವೆಗಳಿಗೆ ಅವಕಾಶ
ದಕ್ಷಿಣ ಕನ್ನಡ:-ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಇಳಿಕೆಯಾಗಿರುತ್ತಿರುವ ಕಾರಣ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಿಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ವಾರಾಂತ್ಯದ ನಿರ್ಬಂಧಗಳನ್ನು ರದ್ದುಗೊಳಿಸಲಾಗಿದೆ. ಆದರೆ, ದೇಗುಲಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಶನಿವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ