ಉಡುಪಿ: ಆತ್ಮಹತ್ಯೆಗೆ ಶರಣಾದ ಜಿಲ್ಲೆಯ ಬಿಜೆಪಿ ನಾಯಕಿ
ಉಡುಪಿ: ಮನನೊಂದ ಬಿಜೆಪಿ ಸ್ಥಳೀಯ ನಾಯಕಿಯೊಬ್ಬರು ತಮ್ಮ ವಾಸವಿರುವ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕುಕ್ಕಿಕಟ್ಟೆ ಎಂಬಲ್ಲಿಇಂದು ನಡೆದಿದೆ. ಮೃತ ಮಹಿಳೆಯನ್ನು ಆಶಾ ಶೆಟ್ಟಿ (48) ಎಂದು ಗುರುತಿಸಲಾಗಿದೆ.
ಇವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ, ಮತ್ತು ಚಂಡೆ ಬಳಗ ಇವುಗಳಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದರೆಂದು ತಿಳಿದುಬಂದಿದೆ.
ಮೃತರ ಬಳಿ ಮರಣಪತ್ರ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳನ್ನು ಬರೆದಿಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಆತ ಹಿನ್ನೆಲೆಯಲ್ಲಿ ಶವವನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನ್ನ ಮಗನ ಸಾವಿನ ನಂತರ ಮಾನಸಿಕವಾಗಿ ಆಶಾ ಶೆಟ್ಟಿ ಸಾಕಷ್ಟು ಕುಗ್ಗಿದ್ದರು ಎನ್ನಲಾಗಿದೆ. ಮಗಳಿಗೆ ವಿವಾಹವಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕರೆ ಮಾಡಿ ಚೆನ್ನಾಗಿ ಮಾತನಾಡಿದ್ದರು ಎಂಬ ಮಾಹಿತಿಯಿದೆ. ಈಗ ಮೃತ ದೇಹವನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಬಿಜೆಪಿ ಕಾರ್ಯಕ್ರಮಗಳಲ್ಲಿ ಬಹಳ ಲವಲವಿಕೆಯಿಂದ ಓಡಾಡಿಕೊಂಡಿದ್ದರು. ಪಕ್ಷದ ಚಟುವಟಿಕೆಗಿಂತ ಜಾಸ್ತಿ ರಾಷ್ಟ್ರೀಯ ಹಬ್ಬ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದರು. ಭಜನೆ ತಂಡದಲ್ಲಿ ಸಕ್ರೀಯರಾಗಿದ್ದರು ಎಂದು ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ