ಉಡುಪಿ: ಕೇಂದ್ರ ಮಾಜಿ ಸಚಿವರಾದ,ಆಸ್ಕರ್ ಫೆರ್ನಾಂಡಿಸ್ ರವರ ನಿಧನಕ್ಕೆ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸಂತಾಪ ಸೂಚಿಸಿದ್ದಾರೆ.
ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮೇರು ನಾಯಕರಾಗಿ ಬೆಳೆದ ಉಡುಪಿ ಜಿಲ್ಲೆಯ ಹೆಮ್ಮೆಯ ರಾಜಕಾರಣಿಯಾಗಿದ್ದ ಆಸ್ಕರ್ ಫೆರ್ನಾಂಡಿಸ್ ರವರ ನಿಧನದಿಂದ ಕರಾವಳಿ ಜಿಲ್ಲೆ ಓರ್ವ ಉತ್ತಮ ನಾಯಕರನ್ನು ಕಳೆದುಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ