Slider

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲಾ ಪ್ರವಾಸ: ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಸಿ.ಎಂ

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ 11:00 ಗಂಟೆಗೆ ಅದಮಾರುನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡದ ಶಂಕು ಸ್ಥಾಪನೆ ನೆರವೇರಿಸುವರು.

ತದನಂತರ ಅಪರಾಹ್ನ 12:30ಕ್ಕೆ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ, 1:00 ಗಂಟೆಗೆ  ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನ್ಯೂ ಸೈನ್ಸ್ ಬ್ಲಾಕ್ ಕಟ್ಟಡದ ಶಂಕುಸ್ಥಾಪನೆ ಮತ್ತು ಕಂಪ್ಯೂಟರ್ ಸೈನ್ಸ್ ಲ್ಯಾಬೋರೇಟರಿ ಉದ್ಘಾಟನೆ, 2:30ಕ್ಕೆ ಕುಂತಲ ನಗರದಲ್ಲಿ ಸಮುದಾಯ ಭವನ ಮತ್ತು ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆ ಹಾಗೂ ಮೂಡುಬೆಳ್ಳೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುವ ರಸ್ತೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಂಗಳೂರು ಮೂಲಕ ಬೆಂಗಳೂರಿಗೆ ತೆರಳುವರು.

ವರದಿ:-UDUPI FIRST
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo