ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ವಿರುದ್ಧ ಅವಹೇಳನಕಾರಿ ಪದೇ ಬಳಕೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಅವರು ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರರವರು ನೀಡಿದ ದೂರಿನ ಆಧಾರದಲ್ಲಿ ಪೂಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ಬಂಟ್ವಾಳದ ಕಾರಿಂಜದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಜಗದೀಶ್ ಕಾರಂತ್ ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ನಡೆಯುವ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ಒಬ್ಬ ಸರ್ಕಾರಿ ಜವಾಬ್ದಾರಿಯುತ ಅಧಿಕಾರಿಯ ಮೇಲೆ ಅವಹೇಳನಕಾರಿ ಪದ ಬಳಕೆ ಮಾಡಿದ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರಯವರು ದೂರು ನೀಡಿರುವರು.
ವರದಿ:-ಉಡುಪಿಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ