Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಧರ್ಮಸ್ಥಳ:-ನ.24 ರಿಂದ ಡಿ.4 ರವರೆಗೆ ಲಕ್ಷದೀಪೋತ್ಸವ

ಬೆಳ್ತಂಗಡಿ: ಪ್ರಸಿದ್ಧ ಯಾತ್ರಾಸ್ಥಳವಾದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ನವೆಂಬರ್ 29 ರಿಂದ ಡಿಸೆಂಬರ್.4ರವರೆಗೆ ಲಕ್ಷ ದೀಪೋತ್ಸವ ನಡೆಯಲಿದೆ. 
ಡಿಸೆಂಬರ್.2ರಂದು ಸಂಜೆ 5:00ಗೆ ಸರಿಯಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬೆಂಗಳೂರಿನ ಎಸ್‌.ವ್ಯಾಸಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ರಾಮಚಂದ್ರ ಭಟ್ಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ನವೆಂಬರ್.3ರಂದು ನಡೆಯುವ ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವನ್ನು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಉದ್ಘಾಟಿಸಲಿದ್ದು, ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ. ವೆಂಕಟೇಶ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಡಾ.ಪಿ. ಗಜಾನನ ಶರ್ಮ, ಚಿತ್ರದುರ್ಗದ ಡಾ.ಪಿ. ಚಂದ್ರಿಕಾ ಮತ್ತು ಬೆಂಗಳೂರಿನ ಡಾ.ಕೆ.ಪಿ. ಪುತ್ತೂರಾಯ ಉಪನ್ಯಾಸ ನೀಡಲಿದ್ದಾರೆ.

ಪ್ರತಿ ರಾತ್ರಿ 9 ರಿಂದ ಉತ್ಸವಗಳು ನಡೆಯಲಿದ್ದು, ನವೆಂಬರ್ 29 ರಂದು ಹೊಸಕಟ್ಟೆ ಉತ್ಸವ, ನವೆಂಬರ್ 30 ರಂದು ಕೆರೆಕಟ್ಟೆ ಉತ್ಸವ, ಡಿಸೆಂಬರ್.1 ರಂದು ಲಲಿತೋದ್ಯಾನ ಉತ್ಸವ, ಡಿಸೆಂಬರ್ 2 ರಂದು ಕಂಚಿಮಾರುಕಟ್ಟೆ ಉತ್ಸವ, ಡಿಸೆಂಬರ್ 3 ರಂದು ಗೌರಿಮಾರುಕಟ್ಟೆ ಉತ್ಸವ, ಹಾಗೂ ಲಕ್ಷ ದೀಪೋತ್ಸವ, ಡಿಸೆಂಬರ್ 4 ರಂದು ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ಜರುಗಲಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo