Slider


3 ಕೃಷಿ ಕಾಯ್ದೆ ರದ್ದತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ25-11-2021

3 ಕೃಷಿ ಕಾಯ್ದೆ ರದ್ದತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಗುರುನಾನಕ್ ಜಯಂತಿ ಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ಇದೀಗ ಆ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಕೃಷಿ ಕಾಯ್ದೆಗಳ ರದ್ದತಿಗೆ ಕೇಂದ್ರ ಸಚಿವ ಸಂಪುಟ ಕೂಡ ಅನುಮೋದನೆ ನೀಡಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆಗೆ ಒಪ್ಪಿಗೆ ನೀಡಿದೆ.

ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ರದ್ದು ಮಾಡಲು ಸಿದ್ಧತೆ ನಡೆದಿದೆ.
ವರದಿ:-ಉಡುಪಿ ಫಸ್ಟ್




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo