ಉಡುಪಿ : ವಿದೇಶದಿಂದ ಜಿಲ್ಲೆಗೆ ಬಂದವರ ಕೋವಿಡ್ ಆರ್-ಟಿ-ಪಿಆರ್ ವರದಿ ನೆಗೆಟಿವ್ ಬಂದಿದ್ದರು ಕೂಡ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ.
ನವೆಂಬರ್20 ರ ಮಂಗಳವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ , ಕೊರೊನಾ ರೂಪಾಂತರಿ 'ಒಮಿಕ್ರಾನ್' ಆತಂಕದ ಹಿನ್ನಲೆಯಲ್ಲಿ ವಿದೇಶದಿಂದ ಬಂದವರ ಮೇಲೆ ನಿಗಾ ವಹಿಸಲಾಗಿದೆ.
ಆರ್-ಟಿ-ಪಿಆರ್ ನೆಗೆಟಿವ್ ವರದಿ ಇದ್ದರೂ ಕೂಡ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು. ಇದರೊಂದಿಗೆ ಕೇರಳದಿಂದ ಬಂದವರಿಗೂ ನೆಗೆಟಿವ್ ರಿಪೋರ್ಟ್ ಕಡ್ದಾಯವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ಮುಗಿಸಿ ಮತ್ತೆ ಟೆಸ್ಟಿಂಗ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಎಲ್ಲಾ ಸಮುದಾಯದ ಮುಖಂಡರು, ಸಂಘ ಸಂಘಟನೆಗಳ ಸಭೆ ಮಾಡಿದ್ದೇವೆ.ಮಾರ್ಗಸೂಚಿ ಪಾಲನೆ ಹಾಗೂ ವ್ಯಾಕ್ಸಿನೇಶನ್ ಬಗ್ಗೆ ಸಹಕಾರ ಕೇಳಿದ್ದೇವೆ. ಮೊದಲ ಡೋಸ್ ಪಡೆಯದವರ ಪತ್ತೆ ಕಾರ್ಯ ನಡೆಯುತ್ತಿದೆ. ಲಸಿಕೆ ಪಡೆಯಲು ನಿರಾಸಕ್ತಿ ತೋರುವವರನ್ನು ಸಂಬಂಧಪಟ್ಟ ಸಮುದಾಯಗಳ ಮುಖಂಡರು ಮನವೊಲಿಸಬೇಕಾಗಿದೆ ಎಂದು ಹೇಳಿದ್ದಾರೆ.
ಇನ್ನು ಕಾಲೇಜು- ಹಾಸ್ಟೆಲ್ ಗಳ ಮೇಲೆ ಹೆಚ್ವಿನ ನಿಗಾ ವಹಿಸಲಾಗಿದೆ. ಮಣಿಪಾಲ ವಿವಿ ಜೊತೆ ಮಾತುಕತೆ ಮಾಡಿದ್ದೇವೆ. ಈ ಯೂನಿವರ್ಸಿಟಿ ಗೆ ಹೊರ ರಾಜ್ಯ ಹೊರ ದೇಶದಿಂದ ಹೆಚ್ಚಿನ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಹೀಗಾಗಿವಿದ್ಯಾರ್ಥಿಗಳಿಗೆ ಸಂಪೂರ್ಣ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಕಡ್ಡಾಯ ಮಾಡಲಾಗಿದೆ.ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮಣಿಪಾಲ ವಿವಿ ಮುಖ್ಯಸ್ಥರು ಹೇಳಿದ್ದಾರೆ ಎಂದು ಡಿಸಿ ತಿಳಿಸಿದ್ದಾರೆ
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ