ಮೃತ ಮಗುವನ್ನು ೮ ವರ್ಷದ ಪ್ರಣಮ್ಯ ಎಂದು ಗುರುತಿಸಲಾಗಿದೆ. ಸಂತೆಕಟ್ಟೆಯಿಂದ ಅಂಬಾಗಿಲು ಕಡೆಗೆ ತಾಯಿ ಮತ್ತು ಮಗು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಸ್ಕೂಟಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಮಗು ರಸ್ತೆಗೆ ಬಿದ್ದಿದ್ದು ಮಗುವಿನ ತಲೆ ಮೇಲೆ ಲಾರಿಯ ಚಕ್ರ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಉಡುಪಿ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ