ಕುಲಭೂಷಣ್ ಜಾಧವ್‌ಗೆ ಬಿಗ್ ರಿಲೀಫ್:-ಮೇಲ್ಮನವಿ ಸಲ್ಲಿಸಲು ಪಾಕಿಸ್ತಾನ ಸಂಸತ್ ಅನುಮತಿ
ಪಾಕಿಸ್ತಾನದಲ್ಲಿ ಬಂಧನವಾಗಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ಮಾಜಿ ನೌಕಾಪಡೆಯ ಅಧಿಕಾರಿ ಕುಲಭೂಷಣ್ ಜಾಧವ್ ಮೇಲ್ಮನವಿ ಸಲ್ಲಿಕೆ ಮಾಡಲು ಅವಕಾಶ ನೀಡುವ ಮಸೂದೆಯನ್ನು ಪಾಕಿಸ್ತಾನ ಸಂಸತ್ತು ಅಂಗೀಕಾರ ಮಾಡಿದೆ.
ಬುಧವಾರ ನಡೆದ ಪಾಕಿಸ್ತಾನ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಈ ಮಸೂದೆಗೆ ಅನುಮೋದನೆ ನೀಡಲಾಗಿದೆ.
ಕುಲಭೂಷಣ್ ಜಾಧವ್ ತನಗೆ ವಿಧಿಸಿಸ ಶಿಕ್ಷೆಯ ವಿರುದ್ಧವಾಗಿ ಮೇಲ್ಮನವಿ ಸಲ್ಲಿಕೆ ಮಾಡುವ ಹಕ್ಕು ಹೊಂದಿದ್ದಾರೆ ಎಂದು ಈ ಹಿಂದೆ ಅಂತಾರಾಷ್ಟ್ರೀಯ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿತ್ತು. ಈಗ ಅಂತಾರಾಷ್ಟ್ರೀಯ ನ್ಯಾಯಾಲಯದ ನಿರ್ಧಾರದ ಪ್ರಕಾರವಾಗಿ ಕುಲಭೂಷಣ್ ಜಾದವ್‌ಗೆ ಮೇಲ್ಮನವಿ ಸಲ್ಲಿಸಲು ಹಕ್ಕನ್ನು ನೀಡುವ ಮಸೂದೆಯನ್ನು ಪಾಕಿಸ್ತಾನದ ಸಂಸತ್ತು ಜಂಟಿ ಅಧಿವೇಶನದಲ್ಲಿ ಅಂಗೀಕಾರ ಮಾಡಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ