ಉಡುಪಿ: ಜಿಲ್ಲೆಯ ಸಂತೆಕಟ್ಟೆಯ ನರ್ಸಿಂಗ್ ಕಾಲೇಜಿನ ಸಮೀಪ ವಿದ್ಯಾರ್ಥಿನಿಯರಿಗೆ ತನ್ನ ಗುಪ್ತಾಂಗ ತೋರಿಸಿ ವಿಕೃತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಖಾಸಗಿ ಬಸ್ ನಿರ್ವಾಹಕನನ್ನು ಉಡುಪಿ ನಗರ ಪೊಲೀಸರು ನಿನ್ನೆ ಬಂಧಿಸಿದ್ದಾರೆ.
ಆರೋಪಿಯ ಕುರಿತು ಉಪೇಂದ್ರ ಯಾನೆ ಉಮಾಶಂಕರ್ ಭಂಡಾರಿ ಬಂಧಿತ ಆರೋಪಿ ಎಂದು ತಿಳಿದಿದ್ದು
ಈತ ಕಳೆದ ಹಲವಾರು ದಿನಗಳಿಂದ ಕಾಲೇಜಿನ ವಿದ್ಯಾರ್ಥಿನಿಯರಿಗೆ ತನ್ನ ಗುಪ್ತಾಂಗವನ್ನು ತೋರಿಸಿ ವಿಕೃತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಹೀಗೆ ಆತ ನವೆಂಬರ್ 6 ರಂದು ರಾತ್ರಿ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿದ್ದನು. ಆದರೆ ಯಾವುದೇ ದೂರು ದಾಖಲಾಗದ ಹಿನ್ನೆಲೆಯಲ್ಲಿ ಪೊಲೀಸರು ಆತನ ವಿರುದ್ಧ ಕ್ರಮ ಜರಗಿಸಿರಲಿಲ್ಲ ಎನ್ನಲಾಗಿದೆ.
ಇದೀಗ ಕಾಲೇಜಿನ ಹಾಸ್ಟೆಲ್‌ನ ಆಡಳಿತಾಧಿಕಾರಿಗಳು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ