Slider


ಉಡುಪಿ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ:-ಹವಾಮಾನ ಇಲಾಖೆ ಎಚ್ಚರಿಕೆ.

ಬಂಗಳಾಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದ ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಕೊಡಗು, ಹಾನಸ, ಕೊಡಗು, ಮಂಡ್ಯ, ಹಾಸನ, ರಾಮನಗರ, ಚಾಮರಾಜ ನಗರಗಳಲ್ಲಿ ನವೆಂಬರ್‌ 13ರ ವರೆಗೆ ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಎಚ್ಚರಿಕೆಯನ್ನು ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಭತ್ತದ ಕಟಾವು ಕಾರ್ಯ ನಡೆಯುತ್ತಿದ್ದು, ಎರಡು ದಿನಗಳ ಕಾಲ ಮಳೆಯಾಗುವ ಭೀತಿಯಿಂದಾಗಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೈರುತ್ಯ ಮುಂಗಾರು ಬಂಗಾಳಕೊಲ್ಲಿಯಿಂದ ಹಾದು ತಮಿಳುನಾಡು ಕರಾವಳಿಯನ್ನು ಸಮೀಪಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo