ಉಡುಪಿ:-ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾಯಕ್ರಮವನ್ನು ನವೆಂಬರ್ 27ರಂದು ಉಡುಪಿಯ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಜಾನಪದ ನೃತ್ಯ, ಜಾನಪದ ಹಾಡು , ಏಕಾಂಕ ನಾಟಕ , ಶಾಸ್ತ್ರೀಯ ಗಾಯನಗಳಾದ ಹಿಂದೂಸ್ಥಾನಿ ಸಂಗೀತ ಹಾಗೂ ಕರ್ನಾಟಕ ಸಂಗೀತ (ವೈಯಕ್ತಿಕ ಸ್ಪರ್ಧೆ), ಶಾಸ್ತ್ರೀಯ ವಾದ್ಯಗಳಾದ ತಬಲಾ, ಸಿತಾರ್, ಕೊಳಲು, ವೀಣೆ, ಮೃದಂಗ (ವೈಯಕ್ತಿಕ), ಹಾರ್ಮೋನಿಯಂ ಹಾಗೂ ಗಿಟಾರ್ (ವೈಯಕ್ತಿಕ), ಶಾಸ್ತ್ರೀಯ ನೃತ್ಯಗಳಾದ ಭರತನಾಟ್ಯ, ಒಡಿಸ್ಸಿ, ಮಣಿಪುರಿ, ಕಥಕ್ ಮತ್ತು ಕೂಚುಪುಡಿ (ವೈಯಕ್ತಿಕ) ಮತ್ತು ಆಶುಭಾಷಣ (ಹಿಂದಿ/ಇಂಗ್ಲೀಷ್/ಕನ್ನಡ-ವೈಯಕ್ತಿಕ) ಸ್ಪರ್ಧೆಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
15 ರಿಂದ 29 ವರ್ಷದೊಳಗಿನ ಯುವಕ/ಯುವತಿಯರು ಮತ್ತು ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಸ್ಫರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧಿಗಳು ತಮ್ಮ ನೋಂದಾವಣಿಯನ್ನು ಸ್ಪರ್ಧೆ ನಡೆಯುವ ಸ್ಥಳದಲ್ಲಿ ಬೆಳಗ್ಗೆ 9 ಗಂಟೆಯೊಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರನ್ನು (ದೂ.ಸಂ: 0820-2521324) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ