ಮಂಗಳೂರು:-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಷತ್ ಚುನಾವಣೆಗೆ ಬಿ.ಜೆ.ಪಿ. ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ನಿರೀಕ್ಷೆಯಂತೆಯೇ ಹಾಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಪರಿಷತ್ ಟಿಕೆಟ್ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಎರಡು ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯಲಿದ್ದು, ಸದ್ಯ ಬಿ.ಜೆ.ಪಿ. ಒಂದು ಸ್ಥಾನಗಳಿಗೆ ಮಾತ್ರ ಅಭ್ಯರ್ಥಿ ಘೋಷಣೆ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಇತ್ತ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯಿಂದ ತನ್ನ ಯಾವುದೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.
ಕೋಟಾ ಶ್ರೀನಿವಾಸ ಪೂಜಾರಿ ನಿರೀಕ್ಷೆಯಂತೆಯೇ ಪರಿಷತ್ ಟಿಕೆಟ್ ನೀಡಲಾಗಿದೆ. ಶ್ರೀನಿವಾಸ ಪೂಜಾರಿ ಈ ಹಿಂದೆ ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ಪ್ರಸ್ತುತ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ಅಲ್ಲೂ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ