ಕಾರ್ಕಳ: ಜಿಲ್ಲೆಯ ಬೈಲೂರು ಸಮೀಪದಲ್ಲಿರುವ ನೀರೆ ಎಂಬಲ್ಲಿ ಸೋಮವಾರ ಸಂಜೆ 4 ಗಂಟಗೆಯ ವೇಳೆಗೆ ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ವ್ಯಕ್ತಿ ದಾರುಣ ರೀತಿಯಲ್ಲಿ ಮೃತ ಪಟ್ಟಿದ್ದಾರೆ. ನೀರೆ ವ್ಯಾಪ್ತಿಯ ರಾಜೀವ ನಗರದ ನಿವಾಸಿ ವಾದಿರಾಜ ಆಚಾರ್ಯ(60) ಮೃತಪಟ್ಟವರು ಎಂದು ತಿಳಿದುಬಂದಿದೆ.
ಸಿಡಿಲು ಬಡಿದ ಪರಿಣಾಮಕ್ಕೆ ಮನೆಯ ವಿದ್ಯುತ್ ಪರಿಕರಗಳು ಸಂಪೂರ್ಣವಾಗಿ ಹಾನಿಗೀಡಾಗಿವೆ. ಜೊತೆಗೆ ಮನೆಗೂ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಅಲ್ಲದೆ, ಈ ಮನೆಯ ಪರಿಸರದಲ್ಲಿ ಇದ್ದ ಹಲವು ಮನೆಗಳಿಗೂ ಹಾನಿ ಸಂಭವಿಸಿದೆ.
ಇನ್ನು ಸಿಡಿಲಾಘಾತಕ್ಕೆ ಕುಸಿದು ಬಿದ್ದ ವಾದಿರಾಜರನ್ನು ತಕ್ಷಣವೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅದಾಗಲೇ ಅವರು ಪ್ರಾಣ ಕಳೆದುಕೊಂಡಿದ್ದರು ಎಂದು ತಿಳಿದುಬಂದಿದೆ.
ನಂತರ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಶವಮಹಜರು ನಡೆಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರೀತು ಘಟನಾ ಸ್ಥಳಕ್ಕೆ ಕಾರ್ಕಳ ಪ್ರಭಾರ ತಹಶೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಶಿವಪ್ರಸಾದ್ ಭಟ್ ಇನ್ನಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ