ಬೆಂಗಳೂರು:-ಕನ್ನಡದ ಖ್ಯಾತ ನಟ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ "ಮರಣೋತ್ತರ ಕರ್ನಾಟಕ ರತ್ನ" ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ಪುನೀತ್ ರಾಜಕುಮಾರ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಗಲಿದ ಅಪ್ಪುವಿನ ಪಾರ್ಥೀವ ಶರೀರದ ದರ್ಶನ ಸಂದರ್ಭದಲ್ಲಿ ನನ್ನ ಮುತ್ತು ಕೊಟ್ಟ ಬಗ್ಗೆ ಬೇರೆಯವರು ಬೇರೆ ಬೇರೆ ರೀತಿಯಲ್ಲಿ ಅಂದುಕೊಂಡಿದ್ದರು. ಆದ್ರೇ ಆ ಮುತ್ತನ್ನು ಕನ್ನಡಿಗರೆಲ್ಲರ ಪರವಾಗಿ ನೀಡಿದ್ದೇನೆ ಎಂಬುದಾಗಿ ತಿಳಿಸಿದರು.
ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ನಮ್ಮ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ