ಮಂಗಳೂರು:-ಖಾಸಗಿ ಸುದ್ದಿ ಸಂಸ್ಥೆಯೊಂದರಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಖಾಸಗಿ ಚಾನೆಲ್ ಒಂದೂರಲ್ಲಿ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಖ್‌ಪಾಲ್ ಪೊಳಲಿ ಹಲ್ಲೆಗೊಳಗಾದವರು.
ಹಲ್ಲೆ ನಡೆಸಿದ ಆರೋಪಿಯನ್ನು ಯದುನಂದನ್ ಎಂದು ಗುರುತಿಸಲಾಗಿದೆ. ವೈಯಕ್ತಿಕ ವಿಚಾರದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿರಬಹುದು ಎಂದು ತಿಳಿದುಬಂದಿದೆ. ಹಲ್ಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಆರೋಪಿ ನಿನ್ನೆ ಸಂಜೆ ರಾಡ್ ನಿಂದ ಸುಖ್ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ತಿಳಿದುಬಂದಿದೆ.
ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಉರ್ವ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ