Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ವಿಧಾನ ಪರಿಷತ್ ಚುನಾವಣೆ:-ಕೋಟಾ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ ಚುನಾವಣೆ:-ಕೋಟಾ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು:-ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಸಚಿವರುಗಳಾದ ಶ್ರೀ ವಿ.ಸುನಿಲ್ ಕುಮಾರ್, ಶ್ರೀ ಎಸ್.ಅಂಗಾರ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ ಮೂಡುಬಿದಿರೆ ಹಾಗೂ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್ ರವರು ಜೊತೆಗಿದ್ದರು‌.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo