Slider

ಪಿ.ಎಂ. ಗರೀಬ್ ಕಲ್ಯಾಣ್ ಅನ್ನ ಯೋಜನೆ ಮಾರ್ಚ್‌ವರೆಗೆ ವಿಸ್ತರಣೆ 24-11-2021

ಪಿ.ಎಂ. ಗರೀಬ್ ಕಲ್ಯಾಣ್ ಅನ್ನ ಯೋಜನೆ ಮಾರ್ಚ್‌ವರೆಗೆ ವಿಸ್ತರಣೆ

ಉಚಿತ ಪಡಿತರ ನೀಡುವ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯನ್ನು ಮಾರ್ಚ್ 2022 ರವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೋವಿಡ್ -19ನಿಂದ ಉಂಟಾದ ಆರ್ಥಿಕ ಹಿನ್ನಡೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ವ್ಯಾಪ್ತಿಗೆ ಬರುವ ಎಲ್ಲಾ ಫಲಾನುಭವಿಗಳಿಗೆ ಸರ್ಕಾರ  ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ಘೋಷಿಸಿತ್ತು.

ಯೋಜನೆಯು ನವೆಂಬರ್ 30 ರಂದು ಕೊನೆಗೊಳ್ಳಬೇಕಿತ್ತು. ಆದರೆ ಅದು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಣೆಯಾಗಲಿದೆ. ಈ ಯೋಜನೆಯಡಿಯಲ್ಲಿ, ಸುಮಾರು 80 ಕೋಟಿ NFSA ಫಲಾನುಭವಿಗಳಿಗೆ ಸರ್ಕಾರವು 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡುತ್ತದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo