ಈ ಬಗ್ಗೆ ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಗೆ ಯಾವುದೇ ಪಕ್ಷದಿಂದ ಸ್ಪರ್ಧಿಸುವುದಿಲ್ಲ, ಒಂದೊಮ್ಮೆ ಸ್ಪರ್ಧಿಸುವುದಾದರೂ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡಲಿದ್ದೇನೆ. ಈ ಬಗ್ಗೆ
ನ.17ರೊಳಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಚುನಾವಣೆಯಲ್ಲಿ ಗೆಲುವು, ಸೋಲು ಮತದಾರರಿಗೆ ಬಿಟ್ಟಿದ್ದು. ಯಾವುದೇ ಪಕ್ಷದಿಂದ ಆಹ್ವಾನ ಬಂದರೂ, ಹೋಗಬೇಕೇ, ಬೇಡವೇ ಎಂಬುದನ್ನು ಅಭ್ಯರ್ಥಿಗಳೇ ನಿರ್ಧರಿಸುತ್ತಾರೆ. ನಾನು ಯಾವುದೇ ಪಕ್ಷದಿಂದ ಚುನಾವಣೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಎಲ್ಲ ಪಕ್ಷಗಳಲ್ಲೂ ಸಹಕಾರಿಗಳು ಇದ್ದಾರೆ. ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನವೋದಯ ಸ್ವಸಹಾಯ ಸಂಘದ ಸದಸ್ಯರು, ಗ್ರಾ.ಪಂ. ಸದಸ್ಯರು, ಸಹಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದರು.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ